ಮಧ್ಯರಾತ್ರಿ ಪೊಲೀಸ್ ಠಾಣೆಯೊಳಗೆ ನುಗ್ಗಿ ಪೊಲೀಸರ ಯುನಿಫಾರ್ಮ್, ಪಿಸ್ತೂಲ್ ಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾದ ಖತರ್ನಾಕ್ ಕಳ್ಳರು
ಉತ್ತರಪ್ರದೇಶ;ಪೊಲೀಸ್ ಠಾಣೆಯಿಂದಲೇ ಸರ್ಕಾರಿ ಪಿಸ್ತೂಲ್ ಮತ್ತು ಸಮವಸ್ತ್ರವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ.
ಆಜಾದ್ ನಗರದ ಬಿದ್ನು ಹೊರಠಾಣೆಯಲ್ಲಿ ಈ ಘಟನೆ ನಡೆದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಪಿ ತೇಜ್ ಸ್ವರೂಪ್ ಸಿಂಗ್ ಅವರು ಔಟ್ ಪೋಸ್ಟ್ ಇನ್ ಚಾರ್ಜ್ ಸುಧಾಕರ್ ಪಾಂಡೆ ಅವರನ್ನು ಅಮಾನತುಗೊಳಿಸಿದ್ದಾರೆ.
ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ಸೇರಿದಂತೆ ಉನ್ನತ ಅಧಿಕಾರಿಗಳು ತೆರಳಿ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ.
ತಡರಾತ್ರಿ ಕಳ್ಳರು ಠಾಣೆಯಲ್ಲಿದ್ದ ಪೆಟ್ಟಿಗೆಯನ್ನು ಕದ್ದು ಪರಾರಿಯಾಗಿದ್ದಾರೆ.ಕಳ್ಳತನವಾಗಿರುವ ವಿಷಯ ಉನ್ನತ ಅಧಿಕಾರಿಗಳಿಗೆ ತಿಳಿದಾಗ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿದೆ.ಪ್ರಕರಣವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ.
ಘಟನೆ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್‍ಪಿ ತೇಜ್ ಸ್ವರೂಪ್ ಸಿಂಗ್ ಅವರು, ಪೊಲೀಸ್ ಠಾಣೆಯಲ್ಲಿಯೇ ಈ ಘಟನೆ ನಡೆದಿದ್ದು, ಸರ್ಕಾರಿ ಪಿಸ್ತೂಲ್ ಮತ್ತು 10 ಕಾಟ್ರಿಡ್ಜ್‌ಗಳು ಕಾಣೆಯಾಗಿದೆ. ಈ ವೇಳೆ ಎಸ್‍ಐ ಔಟ್‍ಪೋಸ್ಟ್‌ನಲ್ಲಿದ್ದರು.ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಕಳ್ಳರ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದು ಹೇಳಿದ್ದಾರೆ.