ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ತಮ್ಮ ನಾಲಗೆ ಬಿಗಿ ಹಿಡಿದುಕೊಂಡು ಮಾತನಾಡಬೇಕು. ಇವರ ರಾಜಕೀಯ ದಾಳಕ್ಕೆ ಇನ್ನೆಷ್ಟು ಹೆಣ ಬೀಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ (H.S Sundaresh) ಪ್ರಶ್ನಿಸಿದರು.
ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಡಿಕೆ ಶಿವಕುಮಾರ್ (D.K Shivakumar) ಹಾಗೂ ಸಿದ್ದರಾಮಯ್ಯ (Siddaramaiah) ಅವರಿಂದ ಕೋಮುಗಲಭೆ ಆಗುತ್ತಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ. ತಮ್ಮ ಪ್ರಚೋದನಾಕಾರಿ ಹೇಳಿಕೆಗಳ ಮೂಲಕ ಈಶ್ವರಪ್ಪ ಯುವಕರನ್ನು ದಾರಿ ತಪ್ಪಿಸುತ್ತಿದ್ದಾರೆ. ಇತಿಹಾಸ ಗೊತ್ತಿಲ್ಲದ ಯುವಕರು ಅವರ ಮಾತು ನಂಬುತ್ತಿದ್ದಾರೆ ಎಂದರು.
ಶಿವಮೊಗ್ಗದಲ್ಲಿ ಇತ್ತೀಚೆಗೆ ಪದೇ ಪದೇ ಕೋಮುಗಲಭೆ ನಡೆಯುತ್ತಿದೆ. ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ. ಇದರಿಂದಾಗಿ ವ್ಯಾಪಾರ ವಹಿವಾಟು ನಡೆಸಲು ವರ್ತಕರಿಗೆ ತೊಂದರೆ ಆಗುತ್ತಿದೆ. ಬಿಜೆಪಿಯಲ್ಲಿ (BJP) ಭ್ರಷ್ಟಾಚಾರ ತಾಂಡವವಾಡುತ್ತಿದೆ. ಈ ಬಗ್ಗೆ ಈಶ್ವರಪ್ಪ ಒಂದೇ ಒಂದು ಮಾತನಾಡುತ್ತಿಲ್ಲ ಎಂದು ಕಿಡಿ ಕಾರಿದರು.
ವರದಿ ಆಕಾಶ್ ಚಲವಾದಿ ಬೆಂಗಳೂರು