ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮುರುಡೇಶ್ವರದ ಡಾ: ಗಣಪತಿ ಭಟ್ ಆಯ್ಕೆ
ಬೆಂಗಳೂರು- ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ದೇವಸ್ಥಾನದ ಅರ್ಚಕರಾದ ಡಾ: ಗಣಪತಿ ಭಟ್ ಅವರನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸೂಚನೆಯ ಮೇರೆಗೆ ಜೆಡಿಎಸ್ ಪಕ್ಷದ ರಾಜ್ಯ ಅಧ್ಯಕ್ಷರಾದ ಸಿ.ಎಂ.ಇಬ್ರಾಹಿಂ ಅವರು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಜೆಡಿಎಸ್ ಪಕ್ಷದ ತತ್ವ ಮತ್ತು ಸಿದ್ದಾಂತಗಳಿಗೆ ಬದ್ಧರಾಗಿ
ಜವಾಬ್ದಾರಿ ವಹಿಸಿಕೊಂಡು ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ಧನೆ ಗೊಳಿಸಲು ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಡಾ: ಗಣಪತಿ ಭಟ್ ಮುರುಡೇಶ್ವರ ಅವರಿಗೆ ಆದೇಶದಲ್ಲಿ ತಿಳಿಸಿದ್ದಾರೆ.