ಉತ್ತರ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಶಿರಸಿಯ ಮಾಜಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ
ಕಾರವಾರ- ಉತ್ತರ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಶಿರಸಿಯ ಮಾಜಿ ಶಾಸಕ , ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅಂತಿಮವಾಗಿ ಆಯ್ಕೆಯಾಗಿದ್ದಾರೆ. ಹಾಲಿ ಸಂಸದ ಅನಂತಕುಮಾರ್ ಹೆಗಡೆ ಈ ಬಾರಿ ಭಾಜಪಾ ಟಿಕೆಟ್ ನಿರಾಕರಿಸಿದ್ದ ಬೆನ್ನಲ್ಲೇ, ಬೇರೆಯವರಿಗೆ ಟಿಕೆಟ್ ನೀಡಬಹುದೆಂದು ಅಂದಾಜಿಸಲಾಗಿತ್ತು. ಅದರಂತೆ ಕೆನರಾ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸ್ಪೀಕರ್ ವಿಶ್ವೇಶ್ವರ ಕಾಗೇರಿ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ.