• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ರಾಜ್ಯ ಸರ್ಕಾರವನ್ನು ಉರುಳಿಸುವ ಬಿಜೆಪಿ, ಜೆಡಿಎಸ್ ನ ಜನತಂತ್ರ ವಿರೋಧಿ ನಡೆಯನ್ನು ವಿರೋಧಿಸಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಜನಾಂದೋಲನ ಸಮಾವೇಶ ನಡೆಸಿದ ಕಾಂಗ್ರೆಸ್

Kannada News Desk by Kannada News Desk
August 9, 2024
in ರಾಜಕೀಯ ಸುದ್ದಿ
0
ರಾಜ್ಯ ಸರ್ಕಾರವನ್ನು  ಉರುಳಿಸುವ ಬಿಜೆಪಿ, ಜೆಡಿಎಸ್ ನ ಜನತಂತ್ರ ವಿರೋಧಿ ನಡೆಯನ್ನು ವಿರೋಧಿಸಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ  ಬೃಹತ್ ಜನಾಂದೋಲನ ಸಮಾವೇಶ ನಡೆಸಿದ ಕಾಂಗ್ರೆಸ್
0
SHARES
493
VIEWS
WhatsappTelegram Share on FacebookShare on TwitterLinkedin

ರಾಜ್ಯ ಸರ್ಕಾರವನ್ನು ಉರುಳಿಸುವ ಬಿಜೆಪಿ, ಜೆಡಿಎಸ್ ನ ಜನತಂತ್ರ ವಿರೋಧಿ ನಡೆಯನ್ನು ವಿರೋಧಿಸಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಜನಾಂದೋಲನ ಸಮಾವೇಶ ನಡೆಸಿದ ಕಾಂಗ್ರೆಸ್

ಮೈಸೂರು-ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ ಮತ್ತು ಅಧಿಕಾರ ದುರ್ಬಳಕೆ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ, ಜೆಡಿಎಸ್ ನ ಜನತಂತ್ರ ವಿರೋಧಿ ನಡೆಯನ್ನು ವಿರೋಧಿಸಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದು ತಿಳಿಸಿದರು .

ಬಿಜೆಪಿ ಮತ್ತು ಜೆಡಿಎಸ್ ಎಷ್ಟೇ ಕಪಟ ಉದ್ದೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ ಎಂದು ಗುಡುಗಿದರು.

ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ. ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ. ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ ಎಂದರು.

ಜೆಡಿಎಸ್ ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ.
ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಹೇಳಿದರು.

ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ.

ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ ಎಂದರು.

ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983 ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250ರೂ ಡೆಪಾಸಿಟ್ ಕಟ್ಟಿದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದರು. ಆ ಚುನಾವಣೆಯಲ್ಲಿ ಜನರೇ 63 ಸಾವಿರ ರೂಪಾಯಿ ಖರ್ಚು ಮಾಡಿ ನನ್ನನ್ನು ಆರಿಸಿದರು. ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ‌. ದಲಿತರು, ಶೋಷಿತರು, ಅಲ್ಪಸಂಖ್ಯಾತರ ಹಾಗೂ ಸಮಸ್ತ ಜನರ ಏಳಿಗೆಗಾಗಿ ಮಾತ್ರ ನನ್ನ ಅಧಿಕಾರ ಮುಡಿಪಾಗಿಟ್ಟಿದ್ದೇನೆ ಎಂದು ತಿಳಿಸಿದರು.

ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಲುಗಾಡಿಸಲು ಸಾಧ್ಯವಿಲ್ಲ ಎಂದರು.

ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ.

ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು ವಿಶೇಷ ತನಿಖಾ ದಳ ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು ಎಸ್‌ಐಟಿ ರಿಕವರಿ ಮಾಡಿ ಆಗಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್ ನಲ್ಲಿದ್ದು ಫ್ರೀಜ್ ಮಾಡಿದ್ದಾರೆ. ಇಷ್ಟು ಪರಿಣಾಮಕಾರಿಯಾಗಿ ಎಸ್‌ಐಟಿ ಯವರು ತನಿಖೆ ನಡೆಸಿದ್ದಾರೆ. ಆದರೂ ಇಡಿಯವರು ಸ್ವಯಂಸ್ಫೂರ್ತಿಯಿಂದ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದರೂ ಸರ್ಕಾರದ ವಿರುದ್ಧ ಏನೂ ದಾಖಲೆ ಸಿಗಲಿಲ್ಲ. ಹೀಗಾಗಿ ಹಗರಣವೇ ಅಲ್ಲದ ಮೂಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು ಎಂದರು.

ನನ್ನದೊಂದು ಪತ್ರ ಇಲ್ಲ, ನನ್ನದೊಂದು ಸಹಿ ಇಲ್ಲ, ಆಗ ನಮ್ಮ ಸರ್ಕಾರ ಅಧಿಕಾರದಲ್ಲೂ ಇರಲಿಲ್ಲ. ಆದರೂ ಹಗರಣ, ಹಗರಣ ಎಂದು ಬೊಬ್ಬೆ ಹಾಕುತ್ತಾ ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ಇದಕ್ಕೆ ನೀವ್ಯಾರೂ ಸೊಪ್ಪು ಹಾಕಬೇಡಿ, ನಂಬಬೇಡಿ ಎಂದರು.

ಬಿ.ಎಸ್.ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ?

ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು? ಸುಪ್ರೀಂಕೋರ್ಟ್ ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ?ಯಡಿಯೂರಪ್ಪ ಅವರು ಚೆಕ್ ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜೇಂದ್ರ ಯಡಿಯೂರಪ್ಪಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ?

15 ಬಜೆಟ್ ಮಂಡಿಸಿದ್ದೇನೆ. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ, ಈಗ ಕಟ್ಟಿಸುತ್ತಿದ್ದೇನೆ. ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮನೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ.

ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ, ವಿಜಯೇಂದ್ರ, ಅರ್ ಆಶೋಕ್ ಸೇರಿದ್ದಾರೆ. ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮ ದ್ರೋಹ ಅಲ್ಲವೇ?

ಮುಡಾ ವಿಚಾರದಲ್ಲಿ ನನ್ನ ತಪ್ಪು ಎಲ್ಲಿದೆ? ಮುಡಾದ ಯಾವ ಸದಸ್ಯರಿಗೂ ನಾನು ಕರೆ ಮಾಡಿಲ್ಲ, ಬೇಡಿಕೆ ಇಟ್ಟಿಲ್ಲ, ಶಿಫಾರಸ್ಸು ಮಾಡಿಲ್ಲ. ನಾನು ಯಾವುದಕ್ಕೂ ಸಹಿ ಹಾಕಿಲ್ಲ. ಹೀಗಿದ್ದಾಗ ಇದರಲ್ಲಿ ನನ್ನ ಪಾತ್ರ ಏನಿದೆ?

ನಮ್ಮ ಜಮೀನು ಅಕ್ರಮವಾಗಿ ವಶಕ್ಕೆ ಪಡೆದು ಸೈಟು, ಪಾರ್ಕ್, ರಸ್ತೆ ಮಾಡಿ ಹಂಚಿಬಿಟ್ಟರು. ಇಲ್ಲಿ ತಪ್ಪು ಮಾಡಿರುವುದು ಮುಡಾ. ತಪ್ಪು ಒಪ್ಪಿಕೊಂಡು ನಂತರ ನನ್ನ ಕುಟುಂಬಕ್ಕೆ ಬದಲಿ ನಿವೇಶನ ನೀಡಿದ್ದಾರೆ. ನನ್ನ ಪತ್ನಿ ಬದಲಿ ಜಮೀನು ಕೊಡಿ ಎಂದು ಅರ್ಜಿ ಹಾಕಿದ್ದರೇ ವಿನಃ ಯಾವುದೋ ನಿರ್ಧಿಷ್ಟ ಜಾಗದಲ್ಲಿ ನಿವೇಶನ ಕೊಡಿ ಎಂದು ಕೇಳಿರಲಿಲ್ಲ.ನಿವೇಶನ ಕೊಟ್ಟವರು ಬಿಜೆಪಿ ಸರ್ಕಾರದವರು. ಈಗ ಹಗರಣ ನಡೆದಿದೆ ಎನ್ನುತ್ತಿರುವವರು ಅವರೇ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಸಚಿವರು, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು, ಅಪಾರ ಸಂಖ್ಯೆಯ ಕಾರ್ಯಕರ್ತರು ಹಾಜರಿದ್ದರು.

Related

Previous Post

ಅರಣ್ಯ ಸಿಬ್ಬಂದಿಗಳು ಸಕ್ರೀಯೆ :  ರಾಜ್ಯಾದ್ಯಂತ ಒಕ್ಕಲೆಬ್ಬಿಸುವ ಅರಣ್ಯ ಅತಿಕ್ರಮಣದಾರರ ಪಟ್ಟಿಗೆ ಚಾಲನ  – ರವೀಂದ್ರ  ನಾಯ್ಕ

Next Post

ಶಿರಸಿಯಲ್ಲಿ ಅಗಸ್ಟ ೧೭ ರಂದು “ ಕುಂಬ್ರಿ ಮರಾಠಿ ಮೀಸಲಾತಿಗೆ ಎರಡು ದಶಕ ’’- ವಿಶ್ಲೇಷಣಾ ಕಾರ್ಯಕ್ರಮ

Kannada News Desk

Kannada News Desk

Next Post
ಶಿರಸಿಯಲ್ಲಿ ಅಗಸ್ಟ ೧೭ ರಂದು “ ಕುಂಬ್ರಿ ಮರಾಠಿ ಮೀಸಲಾತಿಗೆ ಎರಡು ದಶಕ ’’- ವಿಶ್ಲೇಷಣಾ ಕಾರ್ಯಕ್ರಮ

ಶಿರಸಿಯಲ್ಲಿ ಅಗಸ್ಟ ೧೭ ರಂದು `` ಕುಂಬ್ರಿ ಮರಾಠಿ ಮೀಸಲಾತಿಗೆ ಎರಡು ದಶಕ ’’- ವಿಶ್ಲೇಷಣಾ ಕಾರ್ಯಕ್ರಮ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.