ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಜಂಟಿಯಾಗಿ ಆಯೋಜಿಸಿದ್ದ ಬೆಂಗಳೂರು-ಮೈಸೂರು ಪಾದಯಾತ್ರೆ ಇಂದು ಮುಕ್ತಾಯ
ಮೈಸೂರು-ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ದ ಹಗರಣದ ವಿರುದ್ಧದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಬೆಂಗಳೂರು-ಮೈಸೂರು ವರೆಗೆ ಸತತ ಒಂದು ವಾರಗಳ ಪಾದಯಾತ್ರೆಯು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪನವರು ಹಾಗೂ ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಯಶಸ್ವಿಯಾಗಿ ಮುಗಿದಿದ್ದು, ಇಂದು ಮೈಸೂರು ಮಹಾರಾಜ ಮೈದಾನದಲ್ಲಿ ಆಯೋಜಿಸಿದ್ದ ಸಮಾರೋಪ ಸಮಾರಂಭ ಭಾರಿ ಜನ ಬೆಂಬಲದೊಂದಿಗೆ ಜರುಗಿತು.
ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರು, ಕೇಂದ್ರ ಸಚಿವ ಕುಮಾರಸ್ವಾಮಿ ,ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ , ವಿರೋಧ ಪಕ್ಷ ನಾಯಕರಾದ ಶ್ರೀ ಆರ್.ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ, ಶ್ರೀ ಡಿ.ವಿ.ಸದಾನಂದಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ ರಾಧಾಮೋಹನ್ ದಾಸ್ ಅಗರ್ವಾಲ್, ಸಹ ಉಸ್ತುವಾರಿಗಳಾದ ಶ್ರೀ ಸುಧಾಕರ್ ರೆಡ್ಡಿ, ಮಾಜಿ ಉಪಮುಖ್ಯಮಂತ್ರಿ ಗಳಾದ ಶ್ರೀ ಗೋವಿಂದ್ ಕಾರಜೋಳ, ಡಾ ಸಿ.ಎನ್.ಅಶ್ವಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಶ್ರೀ ಸಿ.ಟಿ.ರವಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶ್ರೀ ಜಿ.ಟಿ.ದೇವೇಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಶ್ರೀ ಸುರೇಶ್ ಬಾಬು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರ ಸ್ವಾಮಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಸಂಸದರು, ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.