ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರಿಗೆ ಹೃದಯಾಘಾತ
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರಿಗೆ ಹೃದಯಾಘಾತವಾಗಿದ್ದು ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪರ್ತ್ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಆಸ್ಟ್ರೇಲಿಯಾದ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಲ್ಲಿ ಕಾಮೆಂಟ್ ಮಾಡುವಾಗ ಎದೆನೋವು ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡದ ನಾಯಕ 47 ವರ್ಷದ ರಿಕಿ ಪಾಂಟಿಂಗ್ ತೀವ್ರ ಅಸ್ವಸ್ಥಗೊಂಡ ನಂತರ ಊಟದ ಸಮಯದಲ್ಲಿ ಪರ್ತ್ ಕ್ರೀಡಾಂಗಣದಿಂದ ಆಸ್ಪತ್ರೆಗೆ ರವಾನಿಸಲಾಗಿದೆ.