ಮುಂಬೈ-ಭಾರತ ವಿಶ್ವ ಕಪ್ ಕ್ರಿಕೆಟ್ ಫೈನಲ್ ತಲುಪಿದೆ. ಈ ಮೂಲಕ ಕ್ರಿಕೆಟ್ ಜಗತ್ತಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ. ಎಲ್ಲೆಡೆ ಭಾರತ ವಿಜಯ ಮಾಲೆ ಧರಿಸಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತ 4 ವಿಕೆಟ್ ಕಳೆದುಕೊಂಡು 397 ರನ್ ಗುರಿಯನ್ನು ನೀಡಿತ್ತು. ಆದರೆ ನ್ಯೂಜಿಲ್ಯಾಂಡ್ ರನ್ ಹೊಡೆದು ಸೋಲು ಕಂಡಿತು. ಒಂದು ಹಂತದಲ್ಲಿ ಮಿಚೆಲ್
ವಿರಾಟ್ ಕೊಹ್ಲಿ ಶತಕ.. ಎರಡು ವಿಶ್ವ ದಾಖಲೆ
ವಿರಾಟ್ ಕೊಹ್ಲಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್’ಗಳನ್ನು ಗಳಿಸಿ ದಾಖಲೆ ನಿರ್ಮಿಸಿರುವುದು ಒಂದು ದಾಖಲೆಯಾದರೆ, ಏಕದಿನ ಕ್ರಿಕೆಟ್ ನಲ್ಲಿ 50 ನೆಯ ಶತಕ ದಾಖಲಿಸಿ ಸಚಿನ್ ತೆಂಡೂಲ್ಕರ್ 2 ದಾಖಲೆ ಪುಡಿಗಟ್ಟಿದ ವಿರಾಟ್ ಕೋಹ್ಲಿ ಅಬ್ಬರಕ್ಕೆ ವಿಶ್ವವೇ ಫಿದಾ ಆಗಿದೆ.
ಭಾರತದ ಹೆಮ್ಮೆಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಒಂದೇ ಪಂದ್ಯದಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಎರಡು ದಾಖಲೆಗಳನ್ನು ಪುಡಿಗಟ್ಟುವ ಮೂಲಕ, ಇಂತಹ ಸಾಧನೆ ಮಾಡಿದ ವಿಶ್ವದ ಏಕೈಕ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದಾರೆ. ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 50ನೆಯ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಕೆಚ್ಚೆದೆಯ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ ವೃತ್ತಿಜೀವನದ 50ನೆಯ ಏಕದಿನ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ ವಿರಾಟ್ ಕೊಹ್ಲಿ ಬಾರಿಸಿದ ಒಟ್ಟಾರೆ 80ನೆಯ ಶತಕವಾಗಿದೆ. ಈಗ ವಿಶ್ವಕಪ್ ಟೂರ್ನಿಯಲ್ಲಿ ಕೇವಲ 10 ಇನ್ನಿಂಗ್ಸ್ ನಲ್ಲಿ ಕೊಹ್ಲಿ ಗರಿಷ್ಠ ರನ್ ದಾಖಲಿಸಿರುವ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಭಾರತದ ಗೆಲುವಿನಲ್ಲಿ ಶಮಿ ಮ್ಯಾಜಿಕ್!
ಭಾರತದ ಬೌಲರ್ ಶಮಿ 7ಪ್ರಮುಖ ವಿಕೆಟ್ ಪಡೆಯುವ ಮೂಲಕ ಹೀರೋ ಆದರು. ಒಂದು ಹಂತದಲ್ಲಿ ಮಿಚೆಲ್ ಸ್ಪೋಟಕ ಹೊಡೆತದಿಂದ ಕಂಗೆಟ್ಟಿದ್ದ ಭಾರತವನ್ನು ಪಾರು ಮಾಡಿದ್ದು, ಮಹಮದ್ ಶಮಿ. ತಮ್ಮ ಬೌಲಿಂಗ್ ಮೂಲಕ 7 ವಿಕೆಟ್ ಪಡೆದು ಭಾರತವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ ವಿಶ್ವ ಕಪ್ ವಿಕೆಟ್ ಪಂದ್ಯದಲ್ಲಿ ಅತೀ ಹೆಚ್ಚು ವಿಕೆಟ್ ಪಡೆದಿದ್ದಾರೆ.