ಕುಕ್ಕರ್‌ಬಾಂಬ್ ಸ್ಪೋಟಗೊಂಡ ಗಾಯಗೊಂಡ ಆಟೋ ಚಾಲಕನ ಕುಟುಂಬಬಕ್ಕೆ 50000 ಸಾವಿರ ರೂಪಾಯಿ ಧನ ಸಹಾಯ ಮಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ
ಮಂಗಳೂರು: ನಗರದ ನಾಗುರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ತದನಂತರ ಕಂಕನಾಡಿಯಲ್ಲಿರೋ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ರಿಕ್ಷಾ ಚಾಲಕರ ಆರೋಗ್ಯ ವಿಚಾರಿಸಿದ್ರು. ಇದೀಗ ಮಂಗಳೂರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಡಿಸಿಪಿ ಅನ್ಶು ಕುಮಾರ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.
50 ಸಾವಿರ ಪರಿಹಾರ:
ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ದಾಖಲಾಗಿರುವ ಕಂಕನಾಡಿಯಲ್ಲಿರುವ ಆಸ್ಪತ್ರೆಗೆ ಗೃಹ ಸಚಿವ ಆರಗ ಭೇಟಿ ನೀಡಿದರು.
ಇದೇ ವೇಳೆ ಗಾಯಾಳು ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರಿಗೆ 50,000 ಪರಿಹಾರ ನೀಡಿದ ಅವರು ಕುಟುಂಬಸ್ಥರಿಗೆ ಧೈರ್ಯ ತುಂಬಿದರು.