ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗೆ ಜಾಮೀನು
ಶಿವಮೊಗ್ಗ;ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಯೋರ್ವನಿಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿದೆ.
9ನೇ ಆರೋಪಿ ಸೈಯದ್ ನದೀಮ್ ಎಂಬಾತನಿಗೆ ಜಾಮೀನು ನೀಡಲಾಗಿದೆ.ಹರ್ಷನನ್ನು ಕೊಲೆ ಮಾಡಿದ ಆರೋಪಿಗೆ ಆಶ್ರಯ ನೀಡಿದ ಆರೋಪದಡಿಯಲ್ಲಿ ನದೀಮ್‌ನನ್ನು ಬಂಧಿಸಲಾಗಿತ್ತು.
ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಕೊಲೆ ಕೇಸ್‌ಗೆ ಸಂಬಂಧಿಸಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ನದೀಮ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಸಿ.ಎಂ.ಗಂಗಾಧರ ಅವರಿದ್ದ ನ್ಯಾಯಪೀಠ, ಷರತ್ತುಗಳನ್ನು ವಿಧಿಸಿ ಆರೋಪಿಗೆ ಜಾಮೀನು ಮಂಜೂರು ಮಾಡಿದೆ.