ಸುರತ್ಕಲ್ ಟೋಲ್ ಗೇಟ್ ಶುಲ್ಕವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಕಟ್ಟಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸುತ್ತೋಲೆ
ಮಂಗಳೂರು-ಸುರತ್ಕಲ್ ಟೋಲ್ ರದ್ದುಪಡಿಸಿ ಹೆಜಮಾಡಿ ಟೋಲ್ ಗೇಟಿಗೆ ವಿಲೀನ ಮಾಡಿರುವ ಹಿನ್ನೆಲೆಯಲ್ಲಿ ಸುರತ್ಕಲ್ ಟೋಲ್ ಗೇಟ್ ದರವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಭರಿಸಲು ಎಚ್ ಐಎ ಸುತ್ತೋಲೆ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ ಸುರತ್ಕಲ್ ಟೋಲ್ ಗೇಟ್ ನಲ್ಲಿ ಒಂದು ಕಾರಿನ ಏಕಮುಖ ಪಾಸ್ ಗೆ 60 ರೂ. ಶುಲ್ಕ ವಿಧಿಸಲಾಗುತ್ತಿತ್ತು. ಹೆಜಮಾಡಿ ಟೋಲ್ ಗೇಟ್ ನಲ್ಲಿ 40 ರೂ. ವಿಧಿಸಲಾಗುತ್ತಿತ್ತು. ಇತ್ತೀಚಿನ ಸುತ್ತೋಲೆಯ ನಂತರ, ಹೆಜಮಾಡಿ ಟೋಲ್ ಗೇಟ್ನಲ್ಲಿ ಏಕಮುಖ ಪಾಸ್ಗೆ ರೂ. 100 ಶುಲ್ಕ ವಿಧಿಸಲಾಗುತ್ತದೆ. ಅದೇ ರೀತಿ, ಬಸ್ಗಳು ಮತ್ತು ಟ್ರಕ್ಗಳಿಗೆ ಸುರತ್ಕಲ್ ಟೋಲ್ ಗೇಟ್ ನಲ್ಲಿ 210 ರೂ. ಹೆಜಮಾಡಿ ಟೋಲ್ ಗೇಟ್ನಲ್ಲಿ 145 ರೂ. ವಿಧಿಸಲಾಗುತ್ತಿತ್ತು. ಪರಿಷ್ಕೃತಗೊಂಡ ಬಳಿಕ ರೂ. 355 ವಿಧಿಸಲಾಗುತ್ತಿದೆ.
ಭಾರೀ ನಿರ್ಮಾಣ ಯಂತ್ರೋಪಕರಣಗಳು, ಬೃಹತ್ ಉಪಕರಣಗಳು ಮತ್ತು ಮಲ್ಟಿಆಕ್ಸಲ್ ವಾಹನಗಳಿಗೆ ರೂ. ಸುರತ್ಕಲ್ ಟೋಲ್ ನಲ್ಲಿ 325 ರೂ., ಹೆಜಮಾಡಿ ಟೋಲ್ನಲ್ಲಿ 225, ವಿಧೀಸಲಾಗುತ್ತಿದ್ದರೆ ಇದೀಗ ಅದನ್ನು ರೂ. ಹೆಜಮಾಡಿ ಟೋಲ್ ಗೇಟ್ ನಲ್ಲಿ 550 ರೂ. ವಿಧಿಸಲಾಗುತ್ತಿದೆ.
ಲಘು ವಾಣಿಜ್ಯ ಮತ್ತು ಲಘು ಸರಕು ವಾಹನಗಳಿಗೆ ಸುರತ್ಕಲ್ ಟೋಲ್ ನಲ್ಲಿ 100 ರೂ. ಹೆಜಮಾಡಿ ಟೋಲ್ನಲ್ಲಿ 70 ರೂ. ವಿಧಿಸಲಾಗುತ್ತಿತ್ತು. ಪ್ರಸ್ತುತ ಬದಲಾವಣೆ ಬಳಿಕ ಹೆಜಮಾಡಿ ಟೋಲ್ ಗೇಟ್ ನಲ್ಲಿ 170 ರೂ ವಿಧಿಸಲಾಗುತ್ತಿದೆ ಎಂದು ಸುತ್ತೋಲೆ ಹೇಳಿದೆ.