ಮಂಗಳೂರಿನಲ್ಲಿ ಹಿಂದೂ ಯುವತಿ ಜೊತೆ ಬಸ್ ನಲ್ಲಿ ಸುತ್ತಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು
ಮಂಗಳೂರು: ಹಿಂದೂ ಯುವತಿಯ ಜೊತೆ ಬಸ್ಸಿನಲ್ಲಿ ಸುತ್ತಾಡುತ್ತಿದ್ದ ಮುಸ್ಲಿಂ ಯುವಕನಿಗೆ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕಾರ್ಕಳದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಒಂದೇ ಸೀಟಿನಲ್ಲಿ ಭಿನ್ನ ಕೋಮಿನ ಯುವಕ-ಯುವತಿ ಕುಳಿತಿರುವುದನ್ನು ಕಂಡು ನಂತೂರು ಬಳಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಘಟನೆಯಲ್ಲಿ ಯುವಕನಿಗೆ ಬಸ್ ನಿಂದ ಇಳಿಸಿ ಹಲ್ಲೆ ನಡೆಸಲಾಗಿದೆ. ಹಲ್ಲೆ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ಕುರಿತು ಹಲ್ಲೆಗೊಳಗಾದ ಯುವಕ ಕದ್ರಿ ಠಾಣೆಯಲ್ಲಿ ಕೇಸ್ ದಾಖಲಿಸಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಈ ಕುರಿತು ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.