ಮುರುಘಾ ಶ್ರೀ’ ಪ್ರಕರಣದಿಂದ ಹಿಂದೆ ಸರಿಯಲು 3 ಕೋಟಿ ರೂಪಾಯಿ ಲಂಚದ ಆಮಿಷ
ಮೈಸೂರು- ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾರಣಕ್ಕೆ ಪೊಕ್ಸೊ ಮತ್ತು ಎಸ್ಸಿ-ಎಸ್ಟಿ ಜಾತಿನಿಂದನೆ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಜೈಲಿನಲ್ಲಿರುವ ಚಿತ್ರದುರ್ಗದ ‘ಶ್ರೀ ಜಗದ್ಗುರು ಮುರುಘರಾಜೇಂದ್ರ (ಎಸ್ಜೆಎಂ) ಬೃಹನ್ಮಠ’ದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘರಾಜೇಂದ್ರ ಶರಣರ ವಿರುದ್ದ ಮತ್ತೊಂದು ಆರೋಪ ಕೇಳಿಬಂದಿತ್ತು.
“ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಪ್ರಕರಣದಿಂದ ಹಿಂದೆ ಸರಿಯುವಂತೆ ಮೂರು ಕೋಟಿ ರೂಪಾಯಿ ಆಮಿಷ ಒಡ್ಡಲಾಗಿತ್ತು” ಎಂದು ಒಡನಾಡಿ ಸಂಸ್ಥೆಯ ಪರಶುರಾಂ ಆರೋಪಿಸಿದ್ದಾರೆ.
ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ನ. ೨೫ ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪರಶುರಾಂ ‘ಪೋಕ್ಸೋ ಪ್ರಕರಣದಿಂದ ಹಿಂದೆ ಸರಿಯುವಂತೆ ಮೂರು ಕೋಟಿ ರೂಪಾಯಿ ಆಮಿಷ ಒಡ್ಡಲಾಗಿತ್ತು, ಸಚಿವರೊಬ್ಬರು ಸ್ವಾಮೀಜಿಯವರನ್ನು ಬಿಟ್ಟುಬಿಡಿ ಎಂದು ನಮಗೆ ಹೇಳಿದ್ದರು’ ಎಂದು ಪರಶುರಾಂ ಗಂಭೀರ ಆರೋಪ ಮಾಡಿದ್ದಾರೆ.
ಇನ್ನು ಪೋಸ್ಕೋ ಪ್ರಕರಣದಲ್ಲಿ ಅರೋಪಿಗಳಾಗಿರುವ ಮುರುಘಾ ಶ್ರೀ ಜೈಲಿನಲ್ಲಿ ಇದ್ದಾರೆ.