ಪ್ರಾಂಶುಪಾಲರಿಂದ ಕಿರುಕುಳವೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಿಗೆ ಕಾರಣವೇ?
ಉಡುಪಿ-ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಸಂಭವಿಸಿದೆ.
ಹೆಬ್ರಿಯ ಎಸ್. ಆರ್ ಪಿಯು ಕಾಲೇಜಿನ ವಿದ್ಯಾರ್ಥಿನಿ, ಪೆರ್ಡೂರಿನ ತೃಪ್ತಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯಾಗಿದ್ದಾಳೆ.
ಕೇವಲ 10 ಅಂಕ ಕಡಿಮೆ ಬಂದ ಕಾರಣಕ್ಕಾಗಿ ವಿದ್ಯಾರ್ಥಿನಿ ಈ ನಿರ್ಧಾರ ತೆಗೆದುಕೊಂಡಿದ್ದಾಳೆ ಎನ್ನಲಾಗಿದೆ. ಅಂಕ ಕಡಿಮೆ ಬಂದಿರುವುದಕ್ಕೆ ಕಾಲೇಜಿನ ಪ್ರಾಂಶುಪಾಲರು ಈಕೆಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.
ತೃಪ್ತಿ ಇಲ್ಲಿ ಉಚಿತ ಸೀಟ್ ಪಡೆದುಕೊಂಡಿದ್ದು, ಉಚಿತ ಸೀಟ್ ಪಡೆದಿದ್ದ ಮಕ್ಕಳಿಗೆ ಅಂಕ ಕಡಿಮೆ ಬಂದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯಿಂದ ಮಾನಸಿಕ ಹಿಂಸೆ ನೀಡಲಾಗುತ್ತಿತ್ತು ಎಂದು ಆಕೆಯ ಸಂಬಂಧಿಕರು ಆರೋಪಿಸಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.