12 ವರ್ಷದ ವಿದ್ಯಾರ್ಥಿ ಶಾಲೆಯಲ್ಲಿ ಹೃದಯಾಘಾತದಿಂದ ಸಾವು
ಹುಬ್ಬಳ್ಳಿ- 12 ವರ್ಷದ ಬಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಲಘಟಗಿಯಲ್ಲಿ ನಡೆದಿದೆ.
ಮಹ್ಮದ್ ರಫಿ(12)ಮೃತ ಬಾಲಕ. ಈತ ಧಾರವಾಡ ಜಿಲ್ಲೆ ಕಲಘಟಗಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. 6ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಶಾಲೆಯಲ್ಲಿ ಶಿಕ್ಷಕರು ಪಾಠ ಮಾಡುವಾಗ ತರಗತಿಯಲ್ಲಿ ಕುಸಿದು ಬಿದ್ದಿದ್ದಾನೆ.
ತಕ್ಷಣ ಶಿಕ್ಷಕರು ಬಾಲಕನಿಗೆ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚೇತರಿಸಿಕೊಳ್ಳದೆ ಮೃತಪಟ್ಟಿದ್ದಾನೆ. ಇತ್ತೀಚೆಗೆ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳವಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂತದ್ದೇ ಪ್ರಕರಣ ವರದಿಯಾಗಿದೆ. ಮಕ್ಕಳು ದಿಡೀರ್ ಹೃದಯಾಘಾತಕ್ಕೆ ಒಳಗಾಗಿ ಮೃತಪಡುವ ಉದಾಹರಣೆ ಕೇಳಿ ಬರುತ್ತಿದ್ದು, ಪೋಷಕರಲ್ಲಿ ಭೀತಿ ಉಂಟು ಮಾಡಿದೆ.