ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಫೊನ್ ಮಾಡಿ ಜೀವ ಬೆದರಿಕೆಯೊಡ್ಡಿದ ಪುತ್ತೂರಿನ ಆಸಿಫ್ ವಿರುದ್ಧ ಎಫ್.ಐ.ಆರ್ ದಾಖಲು
ಪುತ್ತೂರು-ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆಯೊಡ್ಡಿದ ಪುತ್ತೂರಿನ ಆಸಿಫ್ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಅನುಮತಿ ನೀಡಿದೆ.
ಪ್ರಮೋದ್ ಮುತಾಲಿಕ್ ಅವರು ತನಗೆ ಮೊಬೈಲ್ ಕರೆ ಮಾಡಿ ಜೀವ ಬೆದರಿಕೆಯೊಡ್ಡಿದ ವ್ಯಕ್ತಿಯ ವಿರುದ್ಧ ಧಾರವಾಡ ಉಪನಗರ ಠಾಣೆಗೆ ದೂರು ನೀಡಿದ್ದರು.
ಈ ವ್ಯಕ್ತಿಯ ಪತ್ತೆಗೆ ಕೋರ್ಟ್ ಅನುಮತಿ ಬೇಕಾಗಿದ್ದರಿಂದ ನ್ಯಾಯಾಲಯದ ಅನುಮತಿ ಪಡೆದಿರುವ ಪ್ರಮೋದ್ ಮುತಾಲಿಕ್ ಬೆದರಿಕೆ ಒಡ್ಡಿದ ವ್ಯಕ್ತಿಯನ್ನು ಶೀಘ್ರ ಪತ್ತೆ ಮಾಡಲು ಪೊಲೀಸರಿಗೆ ಮನವಿ ಮಾಡಿದ್ದಾರೆ.
ಬೆದರಿಕೆಯೊಡ್ಡಿದ ಆ ವ್ಯಕ್ತಿ ಪುತ್ತೂರಿನ ಆಸಿಫ್ ಎಂದು ಗೊತ್ತಾಗಿದೆ. ಈಗಾಗಲೇ ನ್ಯಾಯಾಲಯ ಈ ಸಂಬಂಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಅನುಮತಿ ನೀಡಿದೆ. ಇನ್ನು ಮುಂದೆ ಪೊಲೀಸರು ಆ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.