ಮಹಿಳಾ ಡಾಕ್ಟರ ಅನುಮಾನಾಸ್ಪದ ಸಾವು
ಚಿತ್ರದುರ್ಗ-ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಡಾ.ರೂಪಾ (50) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸೋಮವಾರ ಬೆಳಿಗ್ಗೆ ರೂಪಾ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಮನೆಯ ಕೆಲಸಗಾರರು ಗಮನಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಡಾ.ರೂಪಾ ಅವರ ಪತಿ ಡಾ.ಕೆ.ಜಿ.ರವಿ ಪರಿಶೀಲಿಸಿದಾಗ ಪತ್ನಿ ಮೃತಪಟ್ಟಿದ್ದು ಖಚಿತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.