ಶಿವಮೊಗ್ಗದಲ್ಲಿ ಕಾರು ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ : ಮೂವರು ಸಾವು, ಓರ್ವನ ಸ್ಥಿತಿ ಗಂಭೀರ
ಶಿವಮೊಗ್ಗ- ಶಿವಮೊಗ್ಗದ ಇಲ್ಲಿನ ಹೊರವಲಯದ ಅಬ್ಬಲಗೆರೆ ಸಮೀಪ ಕಲ್ಲಾಪುರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕಾರು ಮತ್ತು ಲಾರಿ ಮುಖಮುಖಿ. ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಈ ದುರ್ಘಟನೆಯಲ್ಲಿ ಮೃತಪಟ್ಟವರನ್ನು ಕಾರಿನಲ್ಲಿದ್ದ ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಹಿಂಬದಿ ಕುಳಿತಿದ್ದ ರುದ್ರೇಶ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಯುವಕರಿದ್ದ ಕಾರು ಶಿವಮೊಗ್ಗದಿಂದ ಸವಳಂಗ ಕಡೆಗೆ ಹೋಗುತ್ತಿತ್ತು. ಲಾರಿಯು ಸವಳಂಗದಿಂದ ಶಿವಮೊಗ್ಗ ಕಡೆಗೆ ಬರುತ್ತಿತ್ತು. ಈ ವೇಳೆ ಮುಖಾಮುಖಿ ಢಿಕ್ಕಿಯಾಗಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.