ಹೆಂಡತಿಯ ಕಿರುಕುಳಕ್ಕೆ ಬೆಸೆತ್ತು ಮದುವೆಯಾದ 3 ತಿಂಗಳಲ್ಲಿ ಗಂಡ ಆತ್ಮಹತ್ಯೆ
ಬೆಂಗಳೂರು -ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮುದ್ದಿನ ಮಡದಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.
ಮಹೇಶ್ವರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದುಬಂದಿದೆ. ಇನ್ನೂ ಪತ್ನಿ ಕವನಾಳ ವಿರುದ್ಧ ಕಿರುಕುಳದ ಆರೋಪ ಕೇಳಿಬಂದಿದೆ.
ಮದುವೆಯಾದ ಕೆಲವೇ ದಿನಗಳಲ್ಲಿ ಪತಿಗೆ ಕವನಾ ಕಿರುಕುಳ ಕೊಡಲು ಆರಂಭಿಸಿದ್ದರಂತೆ. ಗಂಡ-ಹೆಂಡತಿ ಜಗಳ ತೀವ್ರ ಸ್ವರೂಪ ಪಡೆದುಕೊಂಡಿತ್ತು. ನಂತರ ಕವನಾ ಹಾಗೂ ಮಹೇಶ್ವರ್ ಕುಟುಂಬದವರು ಸೇರಿ ಇಬ್ಬರಿಗೂ ಬುದ್ಧಿ ಹೇಳಿದ್ದರು. ಆದರೂ ಕವನಾ ಹಿರಿಯರ ಮಾತಿಗೆ ಗೌರವ ಕೊಡದೇ ಪತಿಯನ್ನು ಅವಮಾನಿಸುತ್ತಿದ್ದಳು ಎನ್ನಲಾಗಿದೆ. ಹೀಗಾಗಿ ಪತಿಯ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮಹೇಶ್ವರ್ ಕುಟುಂಬಸ್ಥರು ಆರೋಪಿಸಿದ್ದಾರೆ.
ಮಹೇಶ್ವರ್ ಕಳೆದ ಐದು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.