ವಿದ್ಯಾರ್ಥಿನಿಯರ ಜೊತೆ ಮುಖ್ಯ ಶಿಕ್ಷಕನ ಅಸಭ್ಯ ವರ್ತನೆ- ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿನಿಯರು
ಮೈಸೂರು- ಮಂಡ್ಯ ಸಮೀಪ ಹಾಸ್ಟೆಲ್ ಒಂದರಲ್ಲಿ ಕಾಮುಕ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರಿದ ಆ ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರೇ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ. ಈಗ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮುಖ್ಯ ಶಿಕ್ಷಕ ಚಿನ್ಮಯ ಆನಂದ ಮೂರ್ತಿಗೆ ಹುಡುಗಿಯರು ಧರ್ಮದೇಟು ನೀಡಿ ಪಾಠ ಕಲಿಸಿದ್ದಾರೆ.
ಶಿಕ್ಷಕ ಚಿನ್ಮಯ ಆನಂದ ಮೂರ್ತಿ ತಡರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ತೋರಿದ್ದಾನೆ. ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿ ಸಹಪಾಠಿಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಕೈಯಲ್ಲಿ ಕೋಲು -ದೊಣ್ಣೆ ಹಿಡಿದ ವಿದ್ಯಾರ್ಥಿನಿಯರು ಕಾಮುಕ ಶಿಕ್ಷನ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಈ ಘಟನೆ ಸ್ಥಳಕ್ಕೆ ಕೆ.ಆರ್.ಎಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಶಿಕ್ಷಕನನ್ನು ಹಿಡಿದು ವಿಚಾರಣೆ ನಡೆಸಿದ ಪೊಲೀಸರು ಇನ್ನೂ ಹಲವು ವಿಚಾರಗಳನ್ನು ಬಹಿರಂಗ ಪಡಿಸಿದ್ದಾರೆ.
ಶಿಕ್ಷಕನ ಕಾಮ ಪುರಾಣದ ಬಗ್ಗೆ ಈತನ ಮೊಬೈಲ್ ನಲ್ಲಿ ಮತ್ತಷ್ಟು ಮಾಹಿತಿ ತೊರಕಿದೆ. ಈತ ಶಿಕ್ಷಕಿಯೊಬ್ಬರನ್ನೂ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದು, ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ. ವಿದ್ಯಾರ್ಥಿನಿಯರಿಗೆ ಆ ವಿಡಿಯೋ ತೋರಿಸಿ ತನ್ನ ಜೊತೆ ಸಹಕರಿಸದಿದ್ದರೆ ಪರೀಕ್ಷೆಯಲ್ಲಿ ಫೇಲ್ ಮಾಡುವ ಬೆದರಿಕೆವೊಡ್ಡಿದ್ದ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.