ಸರ್ಕಾರಿ ಹಾಸ್ಟೆಲ್ನಲ್ಲಿದ್ದುಕೊಂಡು ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿ- ಸರ್ಕಾರಿ ಹಾಸ್ಟೆಲ್ನಲ್ಲಿ ಹೆರಿಗೆ
ಚಿಕ್ಕಮಗಳೂರು-ಹಾಸ್ಟೆಲ್ನಲ್ಲಿದ್ದುಕೊಂಡು ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಹೆರಿಗೆ ಮಾಡಿದ್ದಾಳೆ. ಆದರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹಾಗೂ ಹಾಸ್ಟೆಲ್ ವಾರ್ಡನ್ ವಿಷಯವನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯನ್ನು ವಿಚಾರಿಸಿದರೆ ಹೊಟ್ಟೆಗೆ ಬಟ್ಟೆ ಕಟ್ಟಿಕೊಂಡಿದ್ದಾಳೆ. ಹಾಗಾಗಿ ಗೊತ್ತಾಗಿಲ್ಲ ಎಂದು ಹೇಳುತ್ತಿದ್ದಾರೆ. ಇದೀಗ ಯುವತಿಯನ್ನು ಮನೆಗೆ ಕಳುಹಿಸಿದ ಪೊಲೀಸರು ಬಾಲಕನೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಘಟನೆ ಬೆನ್ನಲ್ಲೇ ಈ ಬಗ್ಗೆ ಹಾಸ್ಟೆಲ್ ವಾರ್ಡನ್ ಹಾಗೂ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಸಂಘಟನೆಗಳು ಒತ್ತಾಯಿಸಿವೆ.
ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಈ ಹಾಸ್ಟೆಲ್ನಲ್ಲಿ ಇದ್ದಾರೆ.ಬಾಲಕಿ ತನ್ನ ಹೊಟ್ಟೆ ಸುತ್ತ ಬಟ್ಟೆಯನ್ನು ಸುತ್ತಿದ್ದು, ಆಕೆ ಗರ್ಭಿಣಿ ಎನ್ನುವುದೇ ಗೊತ್ತಿಲ್ಲ ಎಂದು ಸಮಾಜ ಕಲ್ಯಾಣ ಅಧಿಕಾರಿ ಹೇಳಿದ್ದಾರೆ ಪ್ರತಿ ಮೂರು ತಿಂಗಳಿಗೊಮ್ಮೆ ಹೆಣ್ಣುಮಕ್ಕಳ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಬೇಕು.ಈ ನಿಯಮ ಪಾಲಿಸಿದ್ದರೆ ಮುನ್ನವೇ ವಿಷಯ ಬೆಳಕಿಗೆ ಬರುತ್ತಿತ್ತು ಇದರ ಹೊರತಾಗಿ ಹಾಸ್ಟೆಲ್ನಲ್ಲಿ ಹೆರಿಗೆಗೆ ಅವಕಾಶ ನೀಡಲಾಗಿದೆ ಎಂದು ಕಾರ್ಯಕರ್ತರು, ಪೋಷಕರು ಆರೋಪಿಸಿದ್ದಾರೆ.