ವಿದ್ಯಾರ್ಥಿಯ ಮೇಲೆ ಅತಿಥಿ ಶಿಕ್ಷಕನೊಬ್ಬ ಮನಬಂದಂತೆ ಹಲ್ಲೆ- ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ ಸಾವು
ಗದಗ -ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅತಿಥಿ ಸಹ ಶಿಕ್ಷಕಿ ಹಾಗೂ ವಿದ್ಯಾರ್ಥಿಯ ಮೇಲೆ ಅತಿಥಿ ಶಿಕ್ಷಕನೊಬ್ಬ ಮನಬಂದಂತೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹದ್ಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬಾತ ಅತಿಥಿ ಶಿಕ್ಷಕಿ ಗೀತಾ ಬಾರಕೇರಿ ಹಾಗೂ ವಿದ್ಯಾರ್ಥಿ ಭರತ್ (10) ಮೇಲೆ ಸಲಾಕೆಯಿಂದ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಭರತ್ ಸಾವನ್ನಪ್ಪಿದ್ದಾನೆ.
ಭರತ್ನ ತಾಯಿ ಗೀತಾ ಬಾರಕೇರಿ ಅದೇ ಶಾಲೆಯಲ್ಲಿ ಸಹಶಿಕ್ಷಕಿಯಾಗಿದ್ದು, ಆಕೆಯ ಮೇಲೂ ಮುತ್ತು ಹಲ್ಲೆ ಮಾಡಿದ್ದಾನೆ. ಆಕೆಗೂ ಗಂಭೀರ ಗಾಯಗಳಾಗಿದ್ದು, ಆಕ್ರೋಶ ವ್ಯಕ್ತವಾಗಿದೆ.
ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕ್ಷಕ ಮುತ್ತು ಪರಾರಿಯಾಗಿದ್ದಾನೆ ಶೋಕಿಲಾಲನೂ ಆಗಿರುವ ಆತನಿಗಾಗಿ ಪೊಲೀಸರು ಹುಡುಕುತ್ತಿದ್ದಾರೆ.