ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿ ವಾಣಿ (23) ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ
ಬೆಂಗಳೂರು – ವಿವಿಪುರ ಬಳಿ ಇರುವ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ.
ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿ ವಾಣಿ (23) ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು.
ವಾಣಿ ಕಾಲೇಜು ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಕೂಡಲೇ ಕಾಲೇಜು ಆಡಳಿತ ಮಂಡಳಿ ಆಸ್ಪತ್ರೆಗೆ ದಾಖಲಿಸಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ.
ವಾಣಿ ಆತ್ಮಹತ್ಯೆಗೂ ಮುನ್ನ ಎರಡು ಪುಟಗಳ ಡೆತ್‌ನೋಟ್ ಬರೆದಿಟ್ಟಿದ್ದಾಳೆ. ಇನ್ನೂ ಮದುವೆ ವಿಚಾರಕ್ಕೆ ವಾಣಿ ಬೇಸತ್ತು ಹೋಗಿದ್ದಳು ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಮದುವೆ ನಿಶ್ಚಯವಾಗಿ ರದ್ದಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ವಿವಿ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ವಿಚಾರಣೆಯನ್ನು ನಡೆಸುತ್ತಿದ್ದಾರೆ.