ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ವಸತಿ ಶಾಲೆಯ ಪ್ರಿನ್ಸಿಪಾಲ್
ಅರೆಸ್ಟ್
ಹಾಸನ-ಹಾಸ್ಟೆಲ್‌ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ವಸತಿ ಶಾಲೆಯ ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.
ವಸತಿ ಶಾಲೆಯ ಪ್ರಾಂಶುಪಾಲ ಶಿವಕುಮಾರ್ ಬಂಧಿತ ಆರೋಪಿಯಾಗಿದ್ದು, ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಹಾಸ್ಟೆಲ್‌ನ ವಿದ್ಯಾರ್ಥಿನಿಯರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದರು. ದೂರಿನ ಅನ್ವಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದ್ದಾರೆ.
ಆಪ್ತ ಸಮಾಲೋಚನೆ ವೇಳೆ ಪ್ರಾಂಶುಪಾಲ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ವೇಳೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಹೆಚ್.ಟಿ ಕೋಮಲ ಪ್ರಾಂಶುಪಾಲ ಶಿವಕುಮಾರ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.