ಮುರುಡೇಶ್ವರದಲ್ಲಿ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೋರ್ವ ಸಮುದ್ರದಲ್ಲಿ ಮುಳುಗಿ ಸಾವು
ಭಟ್ಕಳ-ತಾಲೂಕಿನ ಮುರುಡೇಶ್ವರದಲ್ಲಿ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಯೋರ್ವ ನೀರುಪಾಲಾಗಿರುವ ದುರ್ಘಟನೆ ನಡೆದಿದೆ.
ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಫಯಾಜ್ (14) ಅರಬ್ಬಿ ಸಮುದ್ರದಲ್ಲಿ ಅಲೆಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಚಿತ್ರದುರ್ಗದಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳ ತಂಡದ ಪೈಕಿ ಫಯಾಜ್ ಈಜಲು ಸಮುದ್ರಕ್ಕೆ ಇಳಿದಾಗ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಕರಾವಳಿ ಕಾವಲು ಪಡೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.