ವಿಧ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಸರಕಾರಿ ವಸತಿ ಶಾಲೆ ಪ್ರಾಂಶುಪಾಲ ಗಾಳೆಪ್ಪನ ಬಂಧನ
ಯಾದಗಿರಿ : ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಸರ್ಕಾರಿ ವಸತಿ ಶಾಲೆಯ ಪ್ರಾಂಶುಪಾಲ ಗಾಳೆಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಗಾಳೆಪ್ಪ ಪೂಜಾರಿ (40) ಅವರನ್ನು ಫೋಕ್ಸೋ ಕಾಯ್ದೆಯಡಿ ಯಾದಗಿರಿಯ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಾಂಶುಪಾಲರು ವಿದ್ಯಾರ್ಥಿನಿಯೊಂದಿಗೆ ಫೋನ್ನಲ್ಲಿ ಅಸಭ್ಯವಾಗಿ ಮಾತನಾಡಿದ್ದಲ್ಲದೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.