ಹಿರಿಯ ಐಪಿಎಸ್ ಅಧಿಕಾರಿ ಆರ್. ದಿಲೀಪ್ ನಿಧನ
ಬೆಂಗಳೂರು-ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಆರ್. ದಿಲೀಪ್ ಇಂದು ನಿಧನ ಹೊಂದಿದ್ದಾರೆ.
ಐಪಿಎಸ್ ಅಧಿಕಾರಿ ಆರ್. ದಿಲೀಪ್ ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದು, ಯಕೃತ್ತು ಕಸಿ ಮಾಡಿಸಲಾಗಿತ್ತು. ಚಿಕಿತ್ಸೆ ನಂತರ ದಿಲೀಪ್ ಅವರು ಮತ್ತೆ ಕರ್ತವ್ಯಕ್ಕೆ ಮರಳಿದ್ದರು.
ಆದರೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿ ಅಪೋಲೊ ಅಸ್ಪತ್ರೆಗೆ ಮತ್ತೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಧಾರವಾಡ, ಉತ್ತರ ಕನ್ನಡ ಹಾಗೂ ಹಲವು ಜಿಲ್ಲೆಗಳ ಎಸ್ಪಿ ಆಗಿದ್ದರು. ಹುಬ್ಬಳ್ಳಿ-ಧಾರವಾಡ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು.