ನದಿಯಲ್ಲಿ ಈಜಲು ತೆರಳಿದ ಯುವಕರು ನೀರಿನಲ್ಲಿ ಮುಳುಗಿ ಸಾವು
ಹಾವೇರಿ-ತುಂಗಾಭದ್ರಾ ನದಿಯಲ್ಲಿ ಮುಳುಗಿ ಮೂವರು ಯುವಕರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮುದೇನೂರು ಗ್ರಾಮದ ಬಳಿ ನಡೆದಿದೆ.
ನವೀನ್ ಕುರಗುಂದ(20), ವಿಕಾಸ್ ಪಾಟೀಲ್(20), ನೇಪಾಳ ಮೂಲದ ಪ್ರೇಮ್ ಬೋರಾ(25) ಮೃತಪಟ್ಟವರಾಗಿದ್ದು, ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ನದಿಯಲ್ಲಿ ಮೃತದೇಹಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇನ್ನೂ ಕೂಡ ಮೃತದೇಹಗಳು ಪತ್ತೆಯಾಗಿಲ್ಲ. ಶೋಧ ಮುಂದುವರಿದಿದೆ.