ಬೆಂಗಳೂರು- ನಗರದಲ್ಲಿ ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಯುಕೆಜಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಪಿಚ್ಚನಕೆರೆ ಬಳಿ ಸಂಭವಿಸಿದೆ.
ಸಿದ್ದೇನಹಳ್ಳಿಯ ಸ್ವಾಮಿ ಅವರ ಪುತ್ರಿ ಶ್ರೀಸಾಯಿ ಇಂಟರ್ ನ್ಯಾಷನಲ್ ಶಾಲೆಯ ಯುಕೆಜಿ ವಿದ್ಯಾರ್ಥಿನಿ ರಕ್ಷಿತಾ (6) ಮೃತ ಬಾಲಕಿ ಎಂದು ತಿಳಿದು ಬಂದಿದೆ
ಚಾಲಕ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದ ಶಾಲಾ ಬಸ್ ನಿಂದ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದು, ಶಾಲಾ ಬಸ್ ನ ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.
ಶಾಲೆ ಮುಗಿಸಿ ನಲ್ಲಿ ಬರುವ ವೇಳೆ ಘಟನೆ ನಡೆದಿದೆ. ವಿದ್ಯಾರ್ಥಿನಿ ರಕ್ಷಿತಾ ಬಸ್ ಬಾಗಿಲ ಬಳಿಯ ಸೀಟ್’ನಲ್ಲಿ ಕುಳಿತಿದ್ದಳು. ಇತರ ವಿದ್ಯಾರ್ಥಿಗಳನ್ನು ಇಳಿಸಿ ಮುಂದೆ ಸಾಗಬೇಕಾದರೆ ಶಾಲಾ ಸಿಬ್ಬಂದಿ ಬಸ್ ನ ಬಾಗಿಲು ಹಾಕಿರಲಿಲ್ಲ. ಚಾಲಕ ತಿರುವಿನಲ್ಲಿ ಬ್ರೇಕ್ ಹಾಕಿದ ಸಂದರ್ಭದಲ್ಲಿ ಸೀಟಿನ ಮೇಲೆ ಕುಳಿತಿದ್ದ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದಾಳೆ. ಬಸ್ ನ ಹಿಂದಿನ ಚಕ್ರ ತಲೆಯ ಮೇಲೆ ಹತ್ತಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆ ನಂತರ ಚಾಲಕ ಹಾಗೂ ಸಿಬ್ಬಂದಿ ಪರಾರಿಯಾಗಿದ್ದಾರೆ.
ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.