ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ತಾಯಿ–ಮಗ ಸ್ಥಳದಲ್ಲೇ ಸಾವು
ರಾಯಚೂರು-ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ತಾಯಿ–ಮಗ ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಬಳಿಯ ಇಳಕಲ್ ರಸ್ತೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಯರದೊಡ್ಡಿ ತಾಂಡಾದ ಭಾರತಿ (29), ಆಕೆಯ ಪುತ್ರ ಉದಯ್ ಸಿಂಗ್ (11) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.