ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಡೆತ್ ನೋಟ್ ಬರೆದಿಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಬಾಗಲಕೋಟೆ-ತಾಯಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಇಬ್ಬರು ಹೆಣ್ಣು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕಮತಗಿಯಲ್ಲಿ ನಡೆದಿದೆ.
ತಾಯಿ ಉಮಾ ಸುರೇಶ ಮಸರೆಡ್ಡಿ (42) ಮತ್ತು ಇಬ್ಬರು ಮಕ್ಕಳು ಐಶ್ವರ್ಯ (23) ಮತ್ತು ಸೌಂದರ್ಯ (19) ಮೃತ ದುರ್ದೈವಿಗಳು.
ಮೃತರು ಹುನಗುಂದ ತಾಲೂಕಿನ ಸುಳೇಬಾವಿ ಗ್ರಾಮಕ್ಕೆ ಸೇರಿದವರು ಎಂದು ಹೇಳಲಾಗಿದ್ದು, ಐಶ್ವರ್ಯ ಬೆಂಗಳೂರಿನಲ್ಲಿ ಬಿಇ ಸಿವಿಲ್ ಓದುತ್ತಿದ್ದರೆ, ಸೌಂದರ್ಯ ಬಾಗಲಕೋಟೆಯಲ್ಲಿ ಬಿಎಸ್‌ಸಿ ಓದುತ್ತಿದ್ದರು.
ಕಮತಗಿ ಪಟ್ಟಣದ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ನೀರಿನಿಂದ ಮೃತದೇಹವನ್ನು ಹೊರತೆಗೆದಿದ್ದಾರೆ. ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.
ಅಮೀನಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.