ಚಿಕ್ಕಮಗಳೂರು – ಚಿಕ್ಕಮಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಮುಂದಿಟ್ಟು ಹಣ ಪಡೆಯುತ್ತಿದ್ದ ವೇಳೆ ಕಂದಾಯ ನಿರೀಕ್ಷಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಂದಾಯ ನಿರೀಕ್ಷಕ ಮಂಜುನಾಥ್ ಎಂಬುವವರು ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.
ಮಹಿಳೆಯೊಬ್ಬರು ತಮ್ಮ ತಂದೆಯ ಹೆಸರಿನಲ್ಲಿದ್ದ ಸುಮಾರು 2 ಎಕರೆ ಜಮೀನನ್ನು ತನ್ನ ಹೆಸರಿಗೆ ಮಾಡಿ ಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಕಂದಾಯ ನಿರೀಕ್ಷಕ ಮಂಜುನಾಥ್ ಮೊದಲಿಗೆ 10 ಸಾವಿರ ಲಂಚ ಪಡೆದಿದ್ದು ನಂತರ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.
ಈ ಕುರಿತು ಮಹಿಳೆ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದು, ಕಂದಾಯ ನಿರೀಕ್ಷಕ ಮಂಜುನಾಥ್ ಇಂದು 25 ಸಾವಿರ ರೂಗಳನ್ನು ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್, ಪೊಲೀಸ್ ಇನ್ಸೆಕ್ಟರ್ ಅನಿಲ್ ರಾಥೋಡ್, ಸಚಿನ್ ಕುಮಾರ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ