• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಅವರ ನಿಧನಕ್ಕೆ ಇಂದು ಅಫಜಲಪುರ ತಾಲೂಕ ಕಾಂಗ್ರೆಸ ಘಟಕದಿಂದ ಶ್ರದ್ಧಾಂಜಲಿ ಕಾರ್ಯಕ್ರಮ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
March 11, 2023
in ರಾಜ್ಯ ಸುದ್ದಿ
0
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಅವರ ನಿಧನಕ್ಕೆ ಇಂದು ಅಫಜಲಪುರ ತಾಲೂಕ ಕಾಂಗ್ರೆಸ ಘಟಕದಿಂದ ಶ್ರದ್ಧಾಂಜಲಿ ಕಾರ್ಯಕ್ರಮ
0
SHARES
126
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2023/03/VID-20230311-WA0346.mp4

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಅವರ ನಿಧನಕ್ಕೆ ಇಂದು ಅಫಜಲಪುರ ತಾಲೂಕ ಕಾಂಗ್ರೆಸ ಘಟಕದಿಂದ ಶ್ರದ್ಧಾಂಜಲಿ ಕಾರ್ಯಕ್ರಮ

ಅಫಜಲಪುರ -ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಅವರ ನಿಧನಕ್ಕೆ ಇಂದು ಅಫಜಲಪುರ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪ್ರವಾಸಿ ಮಂದಿರದಲ್ಲಿ ತಾಲೂಕ ಕಾಂಗ್ರೆಸ ಅಧ್ಯಕ್ಷ ರಮೇಶ್ ಪೂಜಾರಿ ನೇತೃತ್ವದಲ್ಲಿ ಸಭೆ ಸೇರಿ , ಭಾವಪೂರ್ಣ ಶ್ರದಾಂಜಲಿ ಸಲ್ಲಿಸಿ ಸಂತಾಪ ಸೂಚಿಸಿದರು. ಈ ಸಂದರ್ಭದಲ್ಲಿ ಶಾಸಕ ಎಂ.ವೈ. ಪಾಟೀಲ್, ಕಾಂಗ್ರೆಸ್ ಮುಖಂಡ ಅಪ್ಪರಾವ ಹಿಗ್ಗಿ, ಪುರಸಭಾ ಉಪಾಧ್ಯಕ್ಷರು, ಪುರಸಭಾ ಸದಸ್ಯರು, ಮುಂತಾದವರು ಉಪಸ್ಥಿತರಿದ್ದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನಿಧನ ರಾಜ್ಯದ ಅನೇಕ ರಾಜಕೀಯ ಪಕ್ಷದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಅವರ ನಿಧನಕ್ಕೆ ಮುಖ್ಯಮಂತ್ರಿ, ವಿಪಕ್ಷ ನಾಯಕ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ.ಯ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಅವರು ನಿಧನರಾದ ವಿಷಯ ಅತ್ಯಂತ ಬೇಸರ ಉಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ ಹಾಗೂ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಸಂತಾಪ ಸೂಚಿಸಿದ್ದಾರೆ.


ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ, ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಧ್ರುವನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿಕೋರುತ್ತೇನೆ. ರಾಜಕೀಯ ನಾಯಕ ಮತ್ತು ಸಂಸದೀಯ ಪಟುವಾಗಿ ತನ್ನ ಶ್ರಮ, ಪ್ರಬುದ್ದತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಲಕ್ಷಣಗಳನ್ನು ಹೊಂದಿದ್ದ ಧ್ರುವನಾರಾಯಣ್ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟ. ಅವರ ಸಾಧನೆಯ ಬದುಕು ಶಾಶ್ವತವಾಗಿ ನಮ್ಮ ನೆನಪಲ್ಲಿರುತ್ತದೆ ಎಂದು ಸಂತಾಪ ಸೂಚಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಧ್ರುವ ನಾರಾಯಣ ಅವರ ದಿಢೀರ್ ಸಾವಿನಿಂದ ತೀವ್ರ ಆಘಾತಗೊಂಡಿದ್ದೇನೆ. ವೈಯಕ್ತಿಕವಾಗಿ ಆತ್ಮೀಯರಾಗಿದ್ದ ಅವರು ಕಠಿಣ ನಿರ್ಧಾರ ಕೈಗೊಳ್ಳುವಾಗ ಅತ್ಯುತ್ತಮ ಸಲಹೆ ನೀಡುತ್ತಿದ್ದರು. ಯಾರ ಮನಸ್ಸನ್ನೂ ನೋವಿಸದೆ ಸದಾ ಹಸನ್ಮುಖರಾಗಿದ್ದ ವ್ಯಕ್ತಿತ್ವ ಅವರದ್ದು. ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರು, ಸರಳ ಸಜ್ಜನ ರಾಜಕಾರಣಿಯಾಗಿದ್ದ ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾದರು ಎಂಬ ಸುದ್ದಿ ಕೇಳಿ ನನಗೆ ತೀವ್ರ ದಿಗ್ಭ್ರಮೆ, ಆಘಾತ ಉಂಟಾಗಿದೆ. ಅತ್ಯಂತ ಸ್ನೇಹಶೀಲ ವ್ಯಕ್ತಿಯಾಗಿದ್ದ ಅವರು ವಿಭಿನ್ನ ರಾಜಕಾರಣಿ ಆಗಿದ್ದರು. ಸೋಲುಗೆಲುವುಗಳನ್ನು ಸಮಚಿತ್ತದಿಂದ ಸ್ವೀಕರಿಸುತ್ತಿದ್ದ ಅವರು ಮತ್ತೊಬ್ಬರಿಗೆ ಮಾದರಿ ಆಗಿದ್ದರಲ್ಲದೆ, ಶಾಸಕರಾಗಿ, ಲೋಕಸಭೆ ಸದಸ್ಯರಾಗಿ ರಾಜ್ಯಕ್ಕೆ ಎಣೆ ಇಲ್ಲದ ಸೇವೆ ಮಾಡಿದ್ದರು. ಅವರನ್ನು ಕಳೆದುಕೊಂಡಿದ್ದು ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ. ಆರ್.ಧ್ರುವನಾರಾಯಣ ಅವರ ಅಗಲಿಕೆ ನಮ್ಮ ರಾಜ್ಯಕ್ಕೆ ಭರಿಸಲಾಗದ ನಷ್ಟ. ಅವರಿಗೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ ಟ್ವೀಟ್ ಮಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷರೂ ನನಗೆ ಬಹಳ ಆತ್ಮೀಯರೂ ಆದ ಧ್ರುವ ನಾರಾಯಣ ರವರ ನಿಧನದ ಸುದ್ದಿ ಮನಸ್ಸಿಗೆ ಬಹಳ ಆಘಾತ ತಂದಿದೆ. ಅವರ ಅಗಲಿಕೆಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತಾ ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ,ಕುಟುಂಬಸ್ಥರಿಗೆ ಅಭಿಮಾನಿಗಳಿಗೆ,ಹಿತೈಷಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಪಕ್ಷ, ಸಂಘಟನೆ, ತತ್ವ, ಸಿದ್ದಾಂತವನ್ನೇ ತನ್ನ ಬದುಕಾಗಿಸಿಕೊಂಡಿದ್ದ, ಸರಳ ಸಜ್ಜನಿಕೆಯ ರಾಜಕಾರಣಿ ಬಹುಕಾಲದ ನನ್ನ ಒಡನಾಡಿಯಾಗಿದ್ದ ಮಾಜಿ ಸಂಸದರಾದ ಧೃವ ನಾರಾಯಣ ಅವರ ಅಗಲಿಕೆ ಸುದ್ದಿ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪಕ್ಷ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡು ಬಡವಾಯಿತು. ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ಸಂತಾಪ ಸೂಚಿಸಿದ್ದಾರೆ.

Related

Previous Post

ಕೋಮುವಾದ ಮತ್ತು ನಕಲಿ ಜಾತ್ಯಾತೀತತೆಯ ರಾಜಕಾರಣದ ಮಧ್ಯೆ ಒಂದೇ ಪರ್ಯಾಯ ಎಸ್.ಡಿ.ಪಿ.ಐ – ಭಟ್ಕಳದಲ್ಲಿ ಶೀಘ್ರ ಅಭ್ಯರ್ಥಿ ಘೋಷಣೆ*

Next Post

ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಷ್ಟ್ರೀಯ ಅಧ್ಯಕ್ಷರು , ಸಂಸದರು ಆದ ಇಮ್ರಾನ್ ಪ್ರಥಪಗ್ರಹಿ ಅವರಿಗೆ ಭಟ್ಕಳದ ಕೆ.ಎಂ.ಷರೀಫ್ ಅವರಿಂದ ಸನ್ಮಾನ

Kannada News Desk

Kannada News Desk

Next Post
ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಷ್ಟ್ರೀಯ ಅಧ್ಯಕ್ಷರು , ಸಂಸದರು ಆದ ಇಮ್ರಾನ್ ಪ್ರಥಪಗ್ರಹಿ ಅವರಿಗೆ ಭಟ್ಕಳದ ಕೆ.ಎಂ.ಷರೀಫ್ ಅವರಿಂದ ಸನ್ಮಾನ

ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಷ್ಟ್ರೀಯ ಅಧ್ಯಕ್ಷರು , ಸಂಸದರು ಆದ ಇಮ್ರಾನ್ ಪ್ರಥಪಗ್ರಹಿ ಅವರಿಗೆ ಭಟ್ಕಳದ ಕೆ.ಎಂ.ಷರೀಫ್ ಅವರಿಂದ ಸನ್ಮಾನ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.