ಭಾರತೀಯ ಜನತಾ ಪಕ್ಷದ ‘ವಿಜಯ ಸಂಕಲ್ಪ ಯಾತ್ರೆ’ಯನ್ನು ಸ್ವಾಗತಿಸಿದ ಭಟ್ಕಳ ಶಾಸಕ ಸುನೀಲ್ ನಾಯ್ಕ
ಭಟ್ಕಳ- ಭಟ್ಕಳ ಪಟ್ಟಣಕ್ಕೆ ಸೋಮವಾರ ಆಗಮಿಸಿದ ಭಾರತೀಯ ಜನತಾ ಪಕ್ಷದ ‘ವಿಜಯ ಸಂಕಲ್ಪ ಯಾತ್ರೆ’ಯನ್ನು ಭಟ್ಕಳ ಶಾಸಕ ಸುನೀಲ್ ನಾಯ್ಕ ಸ್ವಾಗತಿಸಿ, ಶ್ರೀ ಗ್ರಾಮದೇವ ಶ್ರೀ ಚನ್ನಪಟ್ಟಣ ಹನುಮಂತ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ರಥಕ್ಕೆ ಚಾಲನೆ ನೀಡಿದರು.
ಪಟ್ಟಣದ ಮೂಡ ಭಟ್ಕಳ ಬೈ ಪಾಸ್ ಮೂಲಕ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ ಕಟೀಲ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಸಹಸ್ರಾರು ಕಾರ್ಯಕರ್ತರೊಂದಿಗೆ ‘ವಿಜಯ ಸಂಕಲ್ಪ ರಥ’ವನ್ನು ಸಂಚರಿಸಿ, ಡಾ.ಚಿತ್ತರಂಜನ ವೃತ್ತದ ಮೂಲಕ ತೆರೆದ ವಾಹನದಲ್ಲಿ ಭಟ್ಕಳ ಸರ್ಕಲ್ ತಲುಪಿತು, ಭಟ್ಕಳ ಸರ್ಕಲ್ ನಲ್ಲಿ ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನಿ ಕುಮಾರ್ ಕಟೀಲ್ ಮಾತನಾಡಿ ಪ್ರಧಾನ ಮಂತ್ರಿ ಮೋದಿಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನ ಸಾಮಾನ್ಯರಿಗೆ ನೀಡಿರುವ ಯೋಜನೆಗಳ ಬಗ್ಗೆ ತಿಳಿಸಿದರು.ಈ ಸಂದರ್ಭದಲ್ಲಿ ಭಟ್ಕಳ ಶಾಸಕ ಸುನೀಲ್ ನಾಯ್ಕ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹೊಗಳಿದರು.
ಈ ಸಂದರ್ಭದಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧ್ಯಕ್ಷರಾದ ವೆಂಕಟೇಶ ನಾಯಕ, ವಿಭಾಗ ಸಹ ಪ್ರಭಾರಿ ಎನ್.ಎಸ್.ಹೆಗಡೆ, ಜಿಲ್ಲಾ ಕಾರ್ಯದರ್ಶಿ ಶಿವಾನಿ ಶಾಂತರಾಮ್ ,ಮಂಡಲಾಧ್ಯಕ್ಷರಾದ ಸುಬ್ರಾಯ ದೇವಾಡಿಗ, ಪಶ್ಚಿಮ ಘಟ್ಟ ಕಾರ್ಯ ಪಡೆ ಅಧ್ಯಕ್ಷ ಗೋವಿಂದ ನಾಯ್ಕ, ಸೇರಿದಂತೆ ಮಂಡಲ ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ, ಶಕ್ತಿ ಕೇಂದ್ರದ ಅಧ್ಯಕ್ಷರು, ಸಾವಿರರರು ಕಾರ್ಯಕರ್ತರು ಉಪಸ್ಥಿತರಿದ್ದರು.