2 ನೆ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯನವರು
ಬೆಂಗಳೂರು-ಸಿದ್ದರಾಮನ ಹುಂಡಿಯ ಬಡ ರೈತ ಕುಟುಂಬದಿಂದ ಬಂದು ರಾಜ್ಯ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸೇರಿದ್ದ ಸಾವಿರಾರು ಜನರ ಸಮ್ಮುಖದಲ್ಲಿ ಸಿದ್ದರಾಮಯ್ಯ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯಪಾಲ ಥಾವರ್ ಚಾಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದರು. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ,ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಅನೇಕ ರಾಷ್ಟ್ರೀಯ ನಾಯಕರು ಈ ಸಮಾರಂಭಕ್ಕೆ ಸಾಕ್ಷಿಯಾದರು.