50 ಸಾವಿರ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕಡು ಭ್ರಷ್ಟ ಮಹಿಳಾ ಪಿ.ಎಸ್.ಐ ಸವಿತಾ
ಬೆಂಗಳೂರು-ಬೆಂಗಳೂರಿನ ಶಿವಾಜಿನಗರದ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಲಂಚ ಕೇಳಿದ ಆರೋಪದ ಮೇಲೆ ಮಹಿಳಾ ಪಿಎಸ್ಐ ಸವಿತಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ.
ಪ್ರಕರಣವೊಂದರ ಸಂಬಂಧ ಆರೋಪಿಯ ಜಾಮೀನು ಪ್ರಕ್ರಿಯೆ ಮಂಜೂರಿಗೆ 50 ಸಾವಿರ ರೂಪಾಯಿ ಲಂಚ ಕೇಳಿದ್ದರು ಎನ್ನಲಾಗಿದೆ.
ಈ ಹಿನ್ನೆಲೆ ಬುಧವಾರ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಪಿಎಸ್ಐ ಸವಿತಾ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.