ಚಾಮರಾಜನಗರ – ಚಾಮರಾಜನಗರ ತಾಲೂಕಿನ ಬಾಗಳಿ ಗ್ರಾಮದ ಬಳಿ ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ಗಳು ರಸ್ತೆ ಕಾಮಗಾರಿ ಹಣ ಬಿಡುಗಡೆ ಮಾಡಲು ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೋಕೋಪಯೋಗಿ ಇಲಾಖೆಯ ಎಇಇ ಕೆಂಪರಾಜು ಮತ್ತು ಎಇ ಮಧುಸೂಧನ ಬಲೆಗೆ ಬಿದ್ದ ಅಧಿಕಾರಿಗಳು ಎಂದು ತಿಳಿದುಬಂದಿದೆ.
ಇಬ್ಬರು 30 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದರು. ದಾಳಿ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದವರನ್ನು ಲೋಕಾಯುಕ್ತರು ಅಟ್ಟಾಡಿಸಿಕೊಂಡು ಹೋಗಿ ಹಿಡಿದಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.