ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಎಸ್ ಐಟಿ ರಚನೆ ಕುರಿತು ಕಾನೂನು ತಜ್ಞರ ಜೊತೆಗೆ ಚರ್ಚೆ – ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ಬೆಂಗಳೂರು-ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದು, ಮರು ತನಿಖೆಗೆ ಎಸ್ ಐಟಿ ರಚನೆ ಮಾಡುವ ಕುರಿತು ಕಾನೂನು ತಜ್ಞರ ಜೊತೆಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸಬೇಕೆಂದು ವಿವಿಧ ಸಂಘಟನೆಗಳ ಸದಸ್ಯರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.ಈ ವೇಳೆ ಮರುತನಿಖೆಗೆ ಎಸ್ ಐಟಿ ರಚನೆ ಮಾಡುವ ಬಗ್ಗೆ ಕಾನೂನು ತಜ್ಞರ ಜೊತೆಗೆ ಚರ್ಚೆ ನಡೆಸುತ್ತೇನೆ ಎಂದು ಭರವಸೆ ನೀಡಿದ್ದಾರೆ.ಈ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಾದ್ಯಂತ ಬಂದಂತಹ 60 ಕ್ಕೂ ಹೆಚ್ಚು ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.