ಗಜೇಂದ್ರಗಡ:6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ ಆರೋಪ ಪ್ರಕರಣ ಗದಗ ಜಿಲ್ಲೆ ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 16 ವರ್ಷದ ಬಾಲಕನಿಂದ ಕೃತ್ಯ ನಡೆದಿದೆ ಎಂಬ ಆರೋಪ ಬಾಲಕಿ ಪೊಷಕರದ್ದಾಗಿದೆ.
ಆರೋಪಿತ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಅಪ್ರಾಪ್ತ ಬಾಲಕಿಯನ್ನು ಮಕ್ಕಳ ರಕ್ಷಣಾ ಘಟಕಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಗದಗ ಎಸ್.ಪಿ, ಬಿ.ಎಸ್. ನೇಮಗೌಡ ಭೇಟಿನಿಡಿ ಪರಿಶೀಲನೆ ನಡೆಸಿದರು. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.