ಶಿರಸಿ-ಉತ್ತರ ಕನ್ನಡ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಆಗ್ರಹಿಸಿ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ನಡೆಯಲಿರುವ ಪಾದಯಾತ್ರೆಯು ಮಾರಿಕಾಂಬಾ ದೇವಾಲಯಲ್ಲಿ ಶ್ರೀ ಮಾರಿಕಾಂಬೆಗೆ ಪೂಜೆ ಸಲ್ಲಿಸುವ ಮೂಲಕ ಇಂದು ನವಂಬರ್ 2 ರ ಬೆಳಿಗ್ಗೆ ಆರಂಭಗೊಂಡಿದೆ.
ಶಿರಸಿಯ ಶ್ರೀ ಮಾರಿಕಾಂಬಾ ದೇವಸ್ಥಾನದಿಂದ ಪ್ರಾರಂಭವಾಗುವ ಈ ಪಾದಯಾತ್ರೆಯು ಕಾರವಾರದ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ನ.9 ರಂದು ಅಂತ್ಯಗೊಳ್ಳಲಿದೆ. ಉತ್ತರಕನ್ನಡ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ನಡೆಯುವ ಈ ಪಾದಯಾತ್ರೆಯಲ್ಲಿ ಜಿಲ್ಲೆಯ ಹಲವು ಸಂಘಸಂಸ್ಥೆಗಳು, ಗಣ್ಯರು, ಸಾಮಾಜಿಕ ಕಾರ್ಯಕರ್ತರು ಹಾಗೂ ಸಹಸ್ರಾರು ಸಾರ್ವಜನಿಕರು ಪಾಲ್ಗೊಂಡಿದ್ದಾರೆ.