ಚೆಕ್ ನಲ್ಲಿ 3.5 ಲಕ್ಷ ರೂ. ಲಂಚ ಪಡೆಯುತ್ತಿದ್ದ ಭ್ರಷ್ಟ ಕಂದಾಯ ನಿರೀಕ್ಷಕ ವಸಂತ ನ ಅರೆಸ್ಟ್ ಮಾಡಿದ ಲೋಕಾಯುಕ್ತರು
ಬೆಂಗಳೂರು- ಲೋಕಾಯುಕ್ತ ದಾಳಿಯಲ್ಲಿ ಅಧಿಕಾರಿ ಹಾಗೂ ಚಾಲಕನ ಬಂಧನವಾಗಿದೆ. ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿಯಲ್ಲಿ ಚೆಕ್ ನಲ್ಲಿ 3.5 ಲಕ್ಷ ರೂ. ಲಂಚ ಪಡೆಯುತ್ತಿದ್ದ ವಸಂತ್ ದಾಸನಪುರದ ಕಂದಾಯ ನಿರೀಕ್ಷಕ ಮತ್ತು ಖಾಸಗಿ ಚಾಲಕ ಬಂಧನಕ್ಕೊಳಗಾಗಿದ್ದಾರೆ.
ಬುಧವಾರ ಖಾಸಗಿ ಹೋಟೆಲ್ ನಲ್ಲಿ 3.5 ಲಕ್ಷ ರೂ. ಪಡೆಯುತ್ತಿದ್ದ ವೇಳೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಖಾತೆ ಪೋಡಿ ಮಾಡಿ ಕೊಡಲು 28 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಎಂದು ತಿಳಿದು ಬಂದಿದೆ.
ವಿಚಾರಣೆ ವೇಳೆ ಹಣವನ್ನು ಮನೆಯಲ್ಲಿ ಇಟ್ಟಿರುವುದಾಗಿ ವಸಂತ್ ಹೇಳಿದ್ದಾನೆ. ಲೋಕಾಯುಕ್ತ ಅಧಿಕಾರಿಗಳು ಆರ್ ಐ ಮನೆಯಲ್ಲಿ ಶೋಧ ನಡೆಸಿದ ವೇಳೆ 9 ಲಕ್ಷ ರೂ. ಹಣ ಪತ್ತೆಯಾಗಿದೆ. ಆ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.