ಬಿಜೆಪಿ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ, ಯುವ ನಾಯಕ ಬಿವೈ ವಿಜಯೇಂದ್ರ ಆಯ್ಕೆ
– ರಾಜ್ಯ ಬಿಜೆಪಿ ವಲಯದಲ್ಲಿ ಸಂಭ್ರಮೋತ್ಸವ
ಬೆಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಯಡಿಯೂರಪ್ಪ ಪುತ್ರ, ಯುವ ನಾಯಕ ಬಿವೈ ವಿಜಯೇಂದ್ರ ಅವರನ್ನು ಹೈಕಮಾಂಡ್ ಆಯ್ಕೆ ಮಾಡಿದೆ.
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಾಸಕ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ. ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ರಾಜ್ಯಾಧ್ಯಕ್ಷ ಆಯ್ಕೆ ಚರ್ಚೆಗೆ ತೆರೆ ಬಿದ್ದಂತಾಗಿದೆ.
ಶಿಕಾರಿಪುರ ಶಾಸಕರಾಗಿ ಸೇವೆ
ವಿಜಯೇಂದ್ರ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದ ಶಾಸಕರಾಗಿದ್ದಾರೆ. ಬಿಜೆಪಿ ಘಟಕದ ಅಧ್ಯಕ್ಷರ ಹುದ್ದೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿಟಿ ರವಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕೇಳಿ ಬಂದಿತ್ತು. ಇದೀಗ ಅಂತಿಮವಾಗಿ ಇದೀಗ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ರಾಜ್ಯದಲ್ಲಿ ಸಂಭ್ರಮೋತ್ಸವ
ವಿಜಯೇಂದ್ರ ಆಯ್ಕೆ ಘೋಷಣೆ ಆಗುತ್ತಿದ್ದಂತೆ ರಾಜ್ಯ ಬಿಜೆಪಿ ಪ್ರಮುಖರು, ಕಾರ್ಯಕರ್ತರು ವಿಜಯೋತ್ಸವ ಆಚರಣೆ ಮಾಡುತ್ತಿದ್ದಾರೆ. ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.