ವಿಶ್ವ ಮೀನುಗಾರರ ದಿನಾಚರಣೆಯಲ್ಲಿ ಮೀನಿನ ಉತ್ಪನ್ನಗಳ ಪ್ರದರ್ಶನದಲ್ಲಿ ಉಡುಪಿ ಕಿನಾರ ಮೀನುಗಾರರ ಉತ್ಪಾದಕರ ಕಂಪನಿಯ ಉತ್ಪನ್ನಗಳ ಪ್ರದರ್ಶನ.
ಬೆಂಗಳೂರು : ಇಲ್ಲಿನ ವಿಧಾನಸೌಧದ ಬೆಂಕ್ವೆಟ್ ಹಾಲ್ ನಲ್ಲಿ ನಡೆದ ವಿಶ್ವ ಮೀನುಗಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರ, ಜಲಾನಯನ ಇಲಾಖೆ, ಮೀನುಗಾರಿಕಾ ಇಲಾಖೆ, ಹಾಗೂ ಸ್ಕೊಡವೇಸ ಸಂಸ್ಥೆಯ ಸಹಯೋಗದಲ್ಲಿ ರಚಿತವಾದ ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿಯು ತನ್ನ ಕಂಪನಿಯಿಂದ ತಯಾರಿಸಿದ ವಿವಿಧ ಮೀನಿನ ಉತ್ಪನ್ನಗಳ ಪ್ರದರ್ಶನದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಹಾಗೂ ಇಲಾಖೆಯ ಅಧಿಕಾರಿಗಳು ಉಡುಪಿ ಕಿನಾರ ಮೀನುಗಾರರ ಉತ್ಪಾದಕರ ಕಂಪನಿಯ ಮಳಿಗೆಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಕಂಪನಿಯ ನಿರ್ದೇಶಕ ಸುದಿನ ಪೂಜಾರಿ ಮುಖ್ಯ ಕಾರ್ಯ ನಿರ್ವಾಹಕಿ ಗಾಯತ್ರಿ, ಡಿಇಒ ವಿದಿಕ್ಷಾ,ಎಲ್.ಆರ್.ಪಿ ಭೂಮಿಕಾ, ವಿಷ್ಣುಪ್ರಸಾದ ಕಂಪನಿಯ ಉತ್ಪನ್ನಗಳ ಮಾಹಿತಿ ನೀಡಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ,ಇಲಾಖಾಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.