ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ಮೇಳದಲ್ಲಿ ಮಲ್ಪೆ ಮೀನುಗಾರ ಉತ್ಪಾದಕ ಕಂಪನಿಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ
ಬೆಂಗಳೂರು : ಜಲಾನಯನ ಇಲಾಖೆ, ಮೀನುಗಾರಿಕಾ ಇಲಾಖೆ ಹಾಗೂ ಸ್ಕೊಡವೆಸ್ ಸಂಸ್ಥೆಯ ಸಹಯೋಗದಲ್ಲಿ ರಚಿತವಾದ ಮಲ್ಪೆ ಮೀನುಗಾರರ ಉತ್ಪಾದಕ ಕಂಪನಿಯು
ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ ೫ ರಿಂದ ೭ ನೇ ತಾರೀಖಿನವರೆಗೆ ನಡೆದ ಸಿರಿಧಾನ್ಯ ಮತ್ತು ಅಂತರಾಷ್ಟ್ರೀಯ ಮೇಳದಲ್ಲಿ ಭಾಗವಹಿಸಿ ತನ್ನ ಕಂಪನಿಯ ಮೀನಿನ ಮೌಲ್ಯವರ್ಧಿತ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟವನ್ನು ಮಾಡಿತು. ಈ ಸಂದರ್ಭದಲ್ಲಿ ಕರ್ನಾಟಕ ಕೃಷಿ ಸಚಿವರಾದ ಚೆಲುವರಾಯ ಸ್ವಾಮಿ,ಉಡುಪಿಯ ನಿಕಟಪೂರ್ವ ಜಿಲ್ಲಾಧಿಕಾರಿ ಕೂರ್ಮರಾವ್, ಜಲಾನಯನ ಇಲಾಖೆಯ ಅಧಿಕಾರಿಗಳು, ಭೇಟಿ ನೀಡಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಸ್ಕೊಡವೆಸ್ ಸಂಸ್ಥೆಯ ರೈತ ಉತ್ಪಾದಕ ಕಂಪನಿಯ ಯೋಜನಾಧಿಕಾರಿ ಪ್ರಶಾಂತ ನಾಯಕ, ಉತ್ತರಕನ್ನಡ ಉಡುಪಿ ಜಿಲ್ಲಾ ಸಂಯೋಜಕ ಗಂಗಾಧರ ನಾಯ್ಕ, ಫೀಲ್ಡ ಆಫಿಸರ್ ಉಮೇಶ್ ಮರಾಠಿ, ವಿನಾಯಕ ಹೆಗಡೆ, ಮಲ್ಪೆ ಮೀನುಗಾರ ಉತ್ಪಾದಕ ಕಂಪನಿಯ ಮುಖ್ಯ ಕಾರ್ಯ ನಿರ್ವಾಹಕ ವಿಷ್ಣು ಪ್ರಸಾದ್, ನಿರ್ದೇಶಕರಾದ ನಿರ್ಮಲ ಸಾಲಿಯಾನ್, ರೇಣುಕಾ ಸುವರ್ಣ ಮತ್ತು ಪದ್ಮಾವತಿ ಮುಂತಾದವರು ಉಪಸ್ಥಿತರಿದ್ದರು.