ಮುರುಡೇಶ್ವರ ದಲ್ಲಿ ಚಲಿಸುತ್ತಿದ್ದ ರೈಲ್ವೆಗೆ ತಲೆ ಕೊಟ್ಟು ಅಪರಿಚಿತ ವ್ಯಕ್ತಿ ಓರ್ವ ಆತ್ಮಹತ್ಯೆ
ಮುರುಡೇಶ್ವರ : ಅಪರಿಚಿತ ವ್ಯಕ್ತಿ ಓರ್ವ ಚಲಿಸುತ್ತಿದ್ದ ರೈಲ್ವೆಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುರುಡೇಶ್ವರದಲ್ಲಿ ನಡೆದಿದೆ. ಕಾರವಾರದಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಪಂಚಗಂಗಾ ಎಕ್ಸ್ಪ್ರೆಸ್ ರೈಲ್ವೆಗೆ ಅಪರಿಚಿತ ವ್ಯಕ್ತಿ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಬಗ್ಗೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತ ದೇಹವನ್ನ ಮುರುಡೇಶ್ವರ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ.