ಸಮಸ್ತ ಸರ್ಕಾರಿ ನೌಕರರ ಪರವಾಗಿ ಮುಖ್ಯಂತ್ರಿಯವರಿಗೆ ಗೌರವ ಸನ್ಮಾನ:ಷಡಾಕ್ಷರಿ ಅವರಿಗೆ ನೌಕರರ ಬಂಧುಗಳು ಸಾಥ್.
ಬೆಂಗಳೂರು:ರಾಜ್ಯದ ಸರ್ಕಾರಿ ನೌಕರರಿಗೆ ವೇತನ ಆಯೋಗಕ್ಕೆ ಅಧ್ಯಕ್ಷರ ಘೋಷಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಅಭಿನಂದನಾ ಸಮಾರಂಭವನ್ನು ಹಮ್ಮಿ ಕೊಳ್ಳಲಾಗಿತ್ತು.
ಸಮಸ್ತ ರಾಜ್ಯದ ಎಲ್ಲಾ ಜಿಲ್ಲೆಯ, ತಾಲ್ಲೂಕಿನ ನೌಕರರ ಸಂಘದ ಮುಖಂಡರ ಸಮ್ಮುಖದಲ್ಲಿ ಮುಖ್ಯಮಂತ್ರಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಗೌರವಿಸಲಾಯಿತು.ಇದೇ ವೇಳೆ ಕಾರ್ಯಕ್ರಮ ದಲ್ಲಿ ಪಾಲ್ಗೊಂಡಿದ್ದ ಸಚಿವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸರಕಾರಿ ನೌಕರರ ವೇತನ ಪರಿಷ್ಕರಣೆಗೆ 7 ನೇ ವೇತನ ಆಯೋಗ ರಚನೆ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರುಗಳ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರುಗಳ ನಿಯೋಗವು ಸರ್ವ ಸದಸ್ಯರು ಪಾಲ್ಗೊಂಡು ಉಪಸ್ಥಿತರಿದ್ದರು.
ವರದಿ:ಶರಣಪ್ಪ.ಹೆಚ್.ಬಾಗಲಕೋಟೆ