ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ನೇತೃತ್ವದ ಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕ್ಕೆ ಆಗ್ರಹಿಸಿ ಫೆ. 5 ನಾಳೆಯಿಂದ ಕುಮಟಾ- ಭಟ್ಕಳ ಕ್ಕೆ ಉತ್ತರ ಕನ್ನಡ ಜನರ ಸ್ವಾಭಿಮಾನ ದ ಪಾದಯಾತ್ರೆ ಆರಂಭ
ಕುಮಟಾ -ಜನರ ಜೀವ ಉಳಿಸುವ ದೃಷ್ಟಿಯಿಂದ ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಅವಶ್ಯವಿದ್ದು ಅದನ್ನು ನಿರ್ಮಾಣ ಮಾಡಲು ತಕ್ಷಣ ಸರ್ಕಾರ ಹಣ ಮಂಜೂರು ಮಾಡಬೇಕು ಎಂದು ಒತಾಯಿಸಿ ನಾಳೆ ಫೆ. ೫ ರಂದು ಕುಮಟಾದಲ್ಲಿ ಈ ಹಿಂದೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನಿಗದಿಯಾಗಿದ್ದ ಸ್ಥಳದಲ್ಲಿ ಭೂಮಿ ಪೂಜೆ ನೆರವೇರಿಸಿ, ಸಾಮಾಜಿಕ ಹೋರಾಟಗಾರ ಅನಂತ್ ಮೂರ್ತಿ ಹೆಗಡೆ ಕುಮಟಾ ದಿಂದ ಭಟ್ಕಳ ವರೆಗೆ 3 ದಿನಗಳ ಪಾದಯಾತ್ರೆ ಆರಂಭಿಸಲಿದ್ದಾರೆ.ಫೆ 5 ರಿಂದ ಫೆ 7 ಈ ಮೂರು ದಿನದಲ್ಲಿ ಭಟ್ಕಳವನ್ನು ತಲುಪಿ, ಸಚಿವ ಮಂಕಾಳ ವೈದ್ಯರಿಗೆ ಮನವಿ ನೀಡಲಿದ್ದೇವೆ ಎಂದು ಹೋರಾಟಗಾರ ಅನಂತಮೂರ್ತಿ ಹೆಗಡೆ ತಿಳಿಸಿದ್ದಾರೆ..
ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಪಟ್ಟಣದಲ್ಲಿ ಗುರುತಿಸಲಾದ ಸ್ಥಳದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಶೀಘ್ರವಾಗಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕುಮಟಾದಿಂದ ಭಟ್ಕಳದ ವರೆಗೆ ಪಾದಯಾತ್ರೆ ನಡೆಸಿ, ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳ ವೈದ್ಯರವರಿಗೆ ಮನವಿ ನೀಡಲಾಗುವುದು. ಆಸ್ಪತ್ರೆಯ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ ಅವರು, ಕುಮಟಾದಲ್ಲಿ ಈ ಹಿಂದೆಯೇ ಆಸ್ಪತ್ರೆಗೆ ಸ್ಥಳ ನಿಗದಿಯಾಗಿತ್ತು, ಆದರೆ ಯಾಕಿನ್ನೂ ಆಸ್ಪತ್ರೆ ನಿರ್ಮಾಣ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು. ಜನರು ನಿಮಗೇನು ತೊಂದರೆ ಮಾಡಿದ್ದಾರೆ? ನಾವು ಏನು ಶಾಪವನ್ನು ಹೊಂದಿದ್ದೇವೆ? ಯಾಕೆ ಅಸಡ್ಡೆ ಮಾಡುತ್ತಿದ್ದೀರಿ? ಎಂದು ಸರಕಾರವನ್ನು ಕುಟುಕಿದ್ದಾರೆ.
ಬೇಡದ ಯೋಜನೆಗಳಿಗೆ 100 ಕೋಟಿ 200 ಕೋಟಿಯನ್ನು ಕೊಡುತ್ತಿದ್ದೀರಿ. ಜನರ ಜೀವ ಉಳಿಸುವ ಆಸ್ಪತ್ರೆ ನಿರ್ಮಾಣಕ್ಕೆ 300 ಕೋಟಿ ನೀಡಲು ಸಾಧ್ಯವಿಲ್ಲವೇ? ಎಂದು ಜನಪ್ರತಿನಿಧಿಗಳಿಗೆ ಕೇಳಿದ್ದಾರೆ.