ಭಟ್ಕಳದ ಹೇಬಳೆ ಪಂಚಾಯತನಲ್ಲಿ ಭ್ರಷ್ಟಾಚಾರ ನಡೆಸಿದ ಅಧಿಕಾರಿಗಳ ರಕ್ಷಣೆ- RTI ಸಂಘದ ರಾಜ್ಯ ಅಧ್ಯಕ್ಷ ರಮೇಶ್ ಕುಣಿಗಲ್ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿ ಎದುರು ಧರಣಿ
ಭಟ್ಕಳ: ಭಟ್ಕಳ ತಾಲೂಕಿನ ಹೆಬಳೆ ಗ್ರಾಮ ಪಂಚಾಯತಿಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದೆ ಜಿಲ್ಲಾ ಪಂಚಾಯತಿಯಿತಿ ಅಧಿಕಾರಿಗಳಳಿಂದ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಕಾರ್ಯಕರ್ತರು ರಾಜ್ಯ ಅಧ್ಯಕ್ಷ ರಮೇಶ್ ಕುಣಿಗಲ್ ನೇತೃತ್ವದಲ್ಲಿ ಉತ್ತರಕನ್ನಡ ಜಿಲ್ಲಾ ಪಂಚಾಯತಿ ಕಚೇರಿ ಎದುರು ಧರಣಿ ನಡೆಸಿದರು.
ಭಟ್ಕಳ ತಾಲ್ಲೂಕಿನಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ತನಿಖೆಗೆ ಒತ್ತಡ ಹೇರಿದ ಮೇಲೆ ಎರಡು ಬಾರಿ ಪ್ರಕರಣದ ತನಿಖೆ ನಡೆಸಲಾಗಿದೆ. ತನಿಖಾ ವರದಿಯಲ್ಲಿ ಹೇಬಳೆ ಪಂಚಾಯತಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ಸಾಬೀತಾಗಿದೆ. ಆದರೆ ಭ್ರಷ್ಟಾಚಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಲ್ಲಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು ವಿಫಲವಾಗಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಹಣಕಾಸು ಆಯೋಗದ ನಿಧಿಯನ್ನ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಕ್ರಿಯಾ ಯೋಜನೆಗಳಿಗೆ ಮಂಜೂರಾತಿ ಪಡೆಯದೆ ಸಂಬAಧಿಗಳ ಹೆಸರಿನಲ್ಲಿ ಬಿಲ್ ಪಾವತಿಸಿಕೊಳ್ಳಲಾಗಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.ಭ್ರಷ್ಟ ಅಧಿಕಾರಿಗಳ ರಕ್ಷಣೆ ಮಾಡಲಾಗಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.