ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ -ಶಂಕಿತನ ಗುರುತು ಪತ್ತೆ ಮಾಡಿದ ಎನ್.ಐ. ಎ?
ಬೆಂಗಳೂರು: ‘ದಿ ರಾಮೇಶ್ವರಂ ಕೆಫೆ’ ಬಾಂಬ್ ಸ್ಪೋಟಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು, ಬಾಂಬ್ ಇರಿಸಿದ್ದ ಶಂಕಿತ ಹಾಗೂ ಆತನಿಗೆ ಸಹಾಯ ಮಾಡಿದ್ದ ಶಂಕಿತನ ಗುರುತು ಪತ್ತೆ ಮಾಡಿರುವುದಾಗಿ ತಿಳಿದು ಬಂದಿದೆ.
‘ಭಯೋತ್ಪಾದನಾ ಸಂಘಟನೆ ಜೊತೆ ಒಡನಾಟವಿಟ್ಟುಕೊಂಡು ಹಲವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಮುಸಾವೀರ್ ಹುಸೇನ್ ಶಾಜೀಬ್ ಎಂಬಾತನೇ ಬಾಂಬ್ ಇರಿಸಿರುವ ಅನುಮಾನ ದಟ್ಟವಾಗಿದೆ. ಆದರೆ, ಈತ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದಾನೆ. ಈತನ ಪತ್ತೆಗೆ ಬಹುಮಾನ ಸಹ ಘೋಷಿಸಲಾಗಿದೆ’ ಎಂದು ತನಿಖಾ ತಂಡದ ಮೂಲಗಳು ಹೇಳಿವೆ.