ಬೈಕ್ ಮತ್ತುಪಿಕಪ್ ವಾಹನ ನಡುವೆ ಭೀಕರ ಅಪಘಾತ- ಬೈಕ್ ಸವಾರ ಸ್ಥಳದಲ್ಲೇ ಸಾವು
ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪೈಂಟರ್ ವೃತ್ತಿ ನಿರ್ವಹಿಸುತ್ತಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಾ.25ರ ಮಧ್ಯಾಹ್ನ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ದಿ.ಜಯರಾಮ್ ಮತ್ತು ಜಯಂತಿ ದಂಪತಿಗಳ ದ್ವಿತೀಯ ಪುತ್ರ ಪುರುಷೋತ್ತಮ (19) ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಸಹಸವಾರ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಶೀಫ್ ಮಗ ತೌಫೀಕ್ (17) ಗಂಭೀರ ಗಾಯಗೊಂಡಿದ್ದಾನೆ.
ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬರುತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು ಪುರುಷೋತ್ತಮ ಮೃತಪಟ್ಟಿದ್ದು, ತೌಫೀಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಬೆಳ್ತಂಗಡಿ ಸಂಚಾರಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.